fbpx
ಮನೋರಂಜನೆ

“ರಾಮಮಂದಿರ ನಿರ್ಮಾಣ ಮುಂದಕ್ಕೆ ಹೋಗುತ್ತಿರುವುದಕ್ಕೆ ಕಾಂಗ್ರೆಸ್​ ಕಾರಣ” ಪ್ರಧಾನಿ ಮೋದಿ ಹೇಳಿಕೆ.

ಅಯೋಧ್ಯಯಲ್ಲಿ ರಾಮಮಂದಿರ ನಿರ್ಮಿಸಬೇಕು ಎಂದು ಹಿಂದೂ ಪರ ಸಂಘಟನೆಗಳು ದಿನೇ ದಿನೇ ಹೋರಾಟವನ್ನು ತೀವ್ರಗೊಳಿಸುತ್ತಿವೆ.. ಆದರೆ ಪ್ರಕರಣ ಕೋರ್ಟ್ ನಲ್ಲಿ ಇರುವುದರಿಂದ ಕೇಂದ್ರ ಸರ್ಕಾರವಾಗಲಿ ಅಥವಾ ಉತ್ತರ ಪ್ರದೇಶದ ಸರ್ಕಾರವಾಗಲಿ ಯಾವುದೇ ತುರ್ತು ಕ್ರಮಗಳನ್ನು ತೆಗೆದುಕೊಂಡಿಲ್ಲ.. n ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯಾವುದೇ ಸುಗ್ರೀವಾಜ್ಞೆ ಹೊರಡಿಸುವುದಿಲ್ಲ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ.

ಎಎನ್​ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ನರೇಂದ್ರ ಮೋದಿ “ರಾಮಮಂದಿರ ನಿರ್ಮಾಣ ಕುರಿತಂತೆ ನ್ಯಾಯಾಂಗ ಪ್ರಕ್ರಿಯೆಯ ಬಳಿಕವಷ್ಟೇ ಈ ಬಗ್ಗೆ ಚಿಂತನೆ ನಡೆಸುತ್ತೇವೆ. ಅಲ್ಲಿಯವರೆಗೆ ಯಾವುದೇ ಸುಗ್ರೀವಾಜ್ಞೆ ತರುವುದಿಲ್ಲ” ಎಂದಿದ್ದಾರೆ. ಅಷ್ಟೇ ಅಲ್ಲದೆ “ರಾಮಮಂದಿರ ನಿರ್ಮಾಣ ಮುಂದೂಡಲು ಕಾಂಗ್ರೆಸ್​ ಕಾರಣ. ಅದರ ನಿಧಾನಗತಿಯ ಧೋರಣೆಯಿಂದ ನ್ಯಾಯಾಂಗ ಪ್ರಕ್ರಿಯೆ ವಿಳಂಬವಾಗಿದೆ” ಎಂದು ಹೇಳಿದ್ದಾರೆ.

ಅಯೋಧ್ಯಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಘಪರಿವಾರಗಳು ಒತ್ತಡ ಹೇರಿದ್ದವು. ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ತರುವಂತೆ ಆಗ್ರಹಿಸಿದ್ದವು. ಈ ಹಿನ್ನಲೆಯಲ್ಲಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top