fbpx
ಸಮಾಚಾರ

“ಕೇಂದ್ರ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡಬೇಕೆಂದು” ಹೇಳಿಕೆ ಕೊಟ್ಟ ಪೇಜಾವರ ಶ್ರೀಗಳು

ವಿಜಯಪುರ ತಾಲೂಕಿನ ಕಗ್ಗೋಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗಳು ದೇಶದ ರೈತನ ಪರವಾಗಿ ದನಿ ಎತ್ತಿದ್ದಾರೆ. ಅದರೊಂದಿಗೆ ಕೇಂದ್ರ್ರ ಸರ್ಕಾರಕ್ಕೆ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸಿ ಎಂದು ಪರೋಕ್ಷವಾಗಿ ಕರೆ ಕೊಟ್ಟಿದ್ದಾರೆ.

ಹೌದು, ಕೇಂದ್ರ ಸರ್ಕಾರವು ರೈತರ ಸಾಲ ಮನ್ನಾ ಮಾಡುವುದು ಒಳ್ಳೆಯದು. ಅದರ ಜತೆಗೆ ರೈತರ ಆರ್ಥಿಕ ಸಬಲೀಕರಣವನ್ನೂ ಮಾಡಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗಳು ತಮ್ಮ ಅಭಿಪ್ರಾಯವನ್ನು ಜನರ ಮುಂದಿಟ್ಟಿದ್ದಾರೆ.

ಇದೇ ವೇಳೆಗೆ ಕೇಳಲಾದ ರೈತ-ರಾಮ ಇವರಿಬ್ಬರಲ್ಲಿ ಯಾರು ಮುಖ್ಯ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, “ನನಗೆ ರೈತ ಹಾಗೂ ರಾಮ ಇಬ್ಬರೂ ಮುಖ್ಯ.” ರಾಮ ಸ್ವಾಭಿಮಾನದ ಪ್ರಶ್ನೆಯಾದರೆ, ರೈತ ದೇಶದ ಪ್ರಶ್ನೆ. ಯಾವುದೇ ಸರ್ಕಾರ ಇರಲಿ ರೈತರ ಬಗ್ಗೆ ಕಾಳಜಿ ತೋರಬೇಕು ಎಂದು ಸ್ಪಷ್ಟವಾಗಿ ಹೇಳಿದರು.

ಹಾಗೆಯೇ ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಕುಂಭಮೇಳದ ಸಂದರ್ಭದಲ್ಲಿ ಸಂಸತ್‌ ಸದಸ್ಯರು ಭಾಗವಹಿಸಲಿದ್ದು, ಆಗ ಅಯೋಧ್ಯೆ ರಾಮಮಂದಿರ ನಿರ್ಮಾಣದ ಬಗ್ಗೆ ಚರ್ಚೆ ನಡೆಸಿ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಎಲ್ಲರಿಗೂ ತಿಳಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top