fbpx
ಮನೋರಂಜನೆ

ಇಂದಿನಿಂದ ‘ಯಜಮಾನ’ ಸಿನಿಮಾದ ಸಾಂಗ್ ಶೂಟಿಂಗ್.

ಪ್ರೇಕ್ಷಕ ವಲಯದಲ್ಲಿ ನಾನಾ ಕಾರಣಗಳಿಂದ ವಿಪರೀತಿ ನಿರೀಕ್ಷೆ ಹುಟ್ಟುಹಾಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಿನ ಸಿನಿಮಾ `ಯಜಮಾನ ಮಾತಿನ ಭಾಗದ ಚಿತ್ರೀಕರಣವನ್ನು ಕಂಪ್ಲೀಟ್ ಮಾಡಿಕೊಂಡಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ.. ಚಿತ್ರದ ಟೈಟಲ್’ನಿಂದ ಹಿಡಿದು ತಾರಾಗಣದವರೆಗೆ ಎಲ್ಲದರಲ್ಲೂ ಕುತೂಹಲ ಮೂಡಿಸಿರುವ ಯಜಮಾನ ಚಿತ್ರತಂಡ ಆದಷ್ಟು ಬೇಗ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

ಇದೀಗ ಚಿತ್ರದ ಹಾಡೊಂದರ ಚಿತ್ರೀಕರಣ ಇಂದಿನಿಂದ ಶುರುವಾಗಲಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. “ಆಗೋಯ್ತು ಮರ್ಯಾದೆ ಸಸ್ತಾ ಮಾಲು.” ಎಂಬ ಸಾಲುಗಳುಳ್ಳ ಈ ಪೆಪ್ಪಿ ಹಾಡನ್ನು ಯೋಗರಾಜ್ ಭಟ್ ಅವ್ರು ರಚಿಸಿದ್ದು ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಮೋಹನ್ ಅವ್ರು ಹಾಡಿಗೆ ನೃತ್ಯ ಸಂಯೋಜನೆ ಮಾಡುತ್ತಿದ್ದಾರೆ.

ಯಜಮಾನ ಬಗ್ಗೆ.
ಬಿ ಸುರೇಶ್ ಮತ್ತು ಶೈಲಜಾ ನಾಗ್ ಅವರು ತಮ್ಮ ಮೀಡಿಯಾ ಹೌಸ್ ಕಡೆಯಿಂದ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪೊನ್ನು ಕುಮಾರ್ ಯಜಮಾನ ಚಿತ್ರದ ನಿರ್ದೇಶನದ ಹೊಣೆ ಹೊತ್ತಿದ್ದಾರೆ.. ವಿ ಹರಿಕೃಷ್ಣ ಅವರು ಸಂಗೀತ ನಿರ್ದೇಶನ ಮಾಡುತಿದ್ದರೆ ಭರ್ಜರಿ ಚೇತನ್ ಸಂಭಾಷಣೆ ಬರೆಯುತ್ತಿದ್ದಾರೆ. ದರ್ಶನ್’ಗೆ ನಾಯಕಿಯರಾಗಿ, ರಶ್ಮಿಕಾ ಮಂದಣ್ಣ ಮತ್ತು ತಾನ್ಯಾ ಹೋಪ್ ನಟಿಸಿದ್ದು ಧನಂಜಯ್ ಮತ್ತು ಸಿಂಗಂ ಖ್ಯಾತಿಯ ಥಾಕುರ್ ಅನೂಪ್ ಸಿಂಗ್ ಸೇರಿದಂತೆ ಅನೇಕ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top