fbpx
ಸಮಾಚಾರ

ತಾತ್ಕಾಲಿಕವಾಗಿ ಬಂದ್ ಆದ ಶ್ರೀ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ !

ಶ್ರೀ ಕ್ಷೇತ್ರ ‘ಶಬರಿಮಲೆ ಅಯ್ಯಪ್ಪ ಸ್ವಾಮಿ’ ಸನ್ನಿಧಿಗೆ ಮಹಿಳೆಯರ ಪ್ರವೇಶ ಮಾಡಬಹುದೆಂದು ಸುಪ್ರೀಂ ಕೋರ್ಟ್ ತೀರ್ಪಿತ್ತಿದ ಬೆನ್ನಲ್ಲೇ ಅನೇಕ ವಾದ-ವಿವಾದಗಳು ನಡೆಯಿತು.

ಕೆಲವರು ಮಹಿಳೆಯರು ದೇವಸ್ಥಾನಕ್ಕೆ ಹೋಗುವುದು ಉಚಿತವೆಂದರೆ ಇನ್ನೂ ಕೆಲವರು ಅನುಚಿತವೆಂದರೂ. ಆದರೆ ಈ ಎಲ್ಲದರ ನಡುವೆಯೂ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರು ಪ್ರವೇಶ ಮಾಡಿ ದರ್ಶನ ಪಡೆದದಿದ್ದರೂ ಆದರೆ ಇದೀಗ ಇದರ ಬೆನ್ನಲ್ಲೇ ಅಯ್ಯಪ್ಪ ಸ್ವಾಮಿ ದೇಗುಲವನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಷ್ಟಕ್ಕೂ ಶ್ರೀ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನವನ್ನು ಬಂದ್ ಮಾಡಿದ್ದಾದರೂ ಏಕೆ?

ಇಂದು ಮುಂಜಾನೆ 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ಇಂದು ಬೆಳಗ್ಗೆ ಸುಮಾರು 3.45ರ ವೇಳೆಯಲ್ಲಿ ಶಬರಿಮಲೆಗೆ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದರು. ಈ ವಿಚಾರ ತಿಳಿದ ಬೆನ್ನಲ್ಲೇ ಇದೀಗ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ದೇಗುಲದಲ್ಲಿ ಶುದ್ದೀಕರಣ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಒಟ್ಟಿನಲ್ಲಿ ದೇವಸ್ಥಾನ ಮಂಡಳಿಯ ಪ್ರಧಾನ ಅರ್ಚಕರ ನೇತೃತ್ವದಲ್ಲಿ ದೇಗುಲದಲ್ಲಿ ಶುದ್ಧೀಕರಣ ಕಾರ್ಯ ನಡೆಸಲಾಗುತ್ತಿದೆ ಎಂದು ಹೇಳಲಾಗಿದ್ದು ಶುದ್ಧೀಕರಣದ ಬಳಿಕ ಅಯ್ಯಪ್ಪ ಭಕ್ತರಿಗೆ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top