fbpx
ಸಮಾಚಾರ

RCB ಅಭಿಮಾನಿಗಳಿಗೊಂದು ಶಾಕಿಂಗ್ ನ್ಯೂಸ್- ಈ ಬಾರಿಯ IPLನಲ್ಲಿ ಕೊಹ್ಲಿ ಆಡೋದು ಅನುಮಾನ.

ಹನ್ನೆರಡನೇ ಸೀಸನ್ ಐಪಿಎಲ್ ಆರಂಭಕ್ಕೆ ಇನ್ನೂ ಎರಡ್ಮೂರು ತಿಂಗಳು ಬಾಕಿ ಇರುವಾಗಲೇ RCB ಅಭಿಮಾನಿಗಳಿಗೊಂದು ಆಘಾತದ ಸುದ್ದಿ ಸಿಕ್ಕಿದೆ. ಅದೇನೆಂದರೆ ರಾಯಲ್ ಚಾಲೆಂಜರ್ಸ್ ತಂಡದ ನಾಯಕ ಈ ಭಾರಿಯ ಐಪಿಎಲ್ ಪಂದ್ಯಗಳನ್ನು ಆಡುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ. ಬಿಸಿಸಿಐ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು ಕೊಹ್ಲಿ ಆಡುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಪ್ರಶ್ನೆ ಈಗ ಎದ್ದಿದೆ.

2019ರ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾ ಪ್ರಮುಖ ವೇಗಿಗಳಾದ ಬುಮ್ರಾ, ಭುವನೇಶ್ವರ್ ಕುಮಾರ್ ಅವರಿಗೆ ವಿಶ್ರಾಂತಿ ನೀಡಬೇಕು ಎಂದು ಬಿಸಿಸಿಐ ಚಿಂತನೆ ನಡೆಸಲಾಗುತ್ತಿದ್ದು ಅದರ ಬೆನ್ನಲ್ಲೇ ನಾಯಕ ವಿರಾಟ್ ಕೊಹ್ಲಿ ಅವರಿಗೂ ವಿಶ್ರಾಂತಿ ಅಗತ್ಯವಿದೆ ಎಂದು ಬಿಸಿಸಿಐ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಐಪಿಎಲ್ ನಲ್ಲಿ ವಿರಾಟ ದರ್ಶನ ನೋಡುವ ಆಸೆಗೆ ತಣ್ಣೀರು ಎರೆಚಿದಂತಾಗಿದೆ. ಆದರೆ ಈ ಕುರಿತು ಬಿಸಿಸಿಐ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಮೇ 30ರಿಂದ ಏಕದಿನ ವಿಶ್ವಕಪ್ ಪಂದ್ಯಾವಳಿ ಇಂಗ್ಲೆಂಡ್ ನಲ್ಲಿ ಆರಂಭಗೊಳ್ಳಲಿದ್ದು ಮೇ 19ರವರೆಗೂ ಐಪಿಎಲ್ ಪಂದ್ಯಾವಳಿ ನಡೆಯಲಿದೆ. ಹೀಗಾಗಿ ಕೊಹ್ಲಿಗೆ ವಿಶ್ರಾಂತಿ ಸಿಗುವುದು ಕಡಿಮೆಯಾಗುತ್ತದೆ. ಇದು ವಿಶ್ವಕಪ್ ಟೂರ್ನಿಯ ಪ್ರದರ್ಶನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ ಕೊಹ್ಲಿ ಐಪಿಎಲ್ ಆಡುವುದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top