fbpx
ಸಮಾಚಾರ

ಆಸ್ಟ್ರೇಲಿಯಾದಲ್ಲಿ ಕಮಾಲ್ ಮಾಡಿದ ಮಯಾಂಕ್- ಗವಾಸ್ಕರ್ ದಾಖಲೆ ಸರಿಗಟ್ಟಿದ ಕನ್ನಡಿಗ.

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಭಾರತ ಅಸೀಸ್ ನಡುವಿನ ನಾಲ್ಕನೇ ಹಾಗೂ ಕಡೆಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿರುವ ಭಾರತ ಚಹಾ ಮೊದಲ ದಿನದಾಟದ ಅಂತ್ಯಕ್ಕೆ 90 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 303 ರನ್ ಕಲೆ ಹಾಕಿದ್ದು ಉತ್ತಮ ಮೊತ್ತದತ್ತ ಸಾಗುತ್ತಿದೆ.

ಇನ್ನು ಪಾದಾರ್ಪಣೆ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ (76) ತೋರಿದ್ದ ಯುವ ಭರವಸೆಯ ಬಲಗೈ ಓಪನಿಂಗ್ ಬ್ಯಾಟ್ಸ್‌ಮನ್ ಕರ್ನಾಟಕದ ಮಯಾಂಕ್ ಅಗರ್ವಾಲ್ ಸತತ ಎರಡನೇ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲೂ ಅರ್ಧಶತಕ ಸಾಧನೆ ಮಾಡಿದ್ದಾರೆ. ಆಸೀಸ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ 27ರ ಹರೆಯದ ಮಯಾಂಕ್, ಆಕರ್ಷಕ ಹೊಡೆತಗಳ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ಮನರಂಜಿಸಿದರು.

112 ಎಸೆತಗಳನ್ನು ಎದುರಿಸಿದ ಮಯಾಂಕ್ ಏಳು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 77 ರನ್ ಗಳಿಸಿದರು. ಅಂತಿಮವಾಗಿ ತಾಳ್ಮೆ ಕಳೆದುಕೊಂಡ ಮಯಾಂಕ್, ಆಫ್ ಸ್ಪಿನ್ನರ್ ನಥನ್ ಲಯನ್ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಮುಂದಾಗಿ ವಿಕೆಟ್ ಒಪ್ಪಿಸಿದರು..

ಆರಂಭಿಕ ಎರಡು ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ 50 ಮೂಲಕ ಕ್ರಿಕೆಟ್ ದಿಗ್ಗಜ ಸುನೀಲ್ ಗವಾಸ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಇನ್ನುಆಸೀಸ್ ನೆಲದಲ್ಲಿ ಎರಡು ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ಭಾರತದ ಎಂಟನೇ ಆರಂಭಿಕ ಆಟಗಾರ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ.

ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಮೊದಲ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಮಾಯಾಂಕ್ 76 ರನ್ ಗಳಿಸಿದ್ದರು. ನಂತರ ದ್ವಿತೀಯ ಇನ್ನಿಂಗ್ಸ್ ನಲ್ಲಿ 42 ರನ್ ಬಾರಿಸಿದ್ದರು. ಇದೀಗ ತನ್ನ ಮೂರನೇ ಇನ್ನಿಂಗ್ಸ್ ನಲ್ಲಿ 77 ರನ್ ಬಾರಿಸಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top