fbpx
ಸಮಾಚಾರ

ಸ್ಯಾಂಡಲ್‌ವುಡ್ ಮೇಲೆ ಐಟಿ ದಾಳಿ ಆಗುವುದರ ಹಿಂದೆ ಇರುವ ಮಾಸ್ಟರ್ ಪ್ಲಾನ್ ಏನು ಗೊತ್ತಾ ?

ಗುರುವಾರ ಬೆಳ್ಳಂಬೆಳಗ್ಗೆ ಸ್ಯಾಂಡಲ್ ವುಡ್ ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು , ಚಂದನವನದ ನಟ ನಿರ್ದೇಶಕರ ಮನೆ ಮೇಲೆ ದಾಳಿ ಮಾಡಲಾಗಿರುವುದು ಈಗಾಗಲೇ ಜಗಜ್ಜಾಹೀರಾತಾಗಿದೆ.

ಇದೀಗ ಈ ಬೆನ್ನಲ್ಲೇ ಸ್ಯಾಂಡಲ್ ವುಡ್ ಗೆ ಐಟಿ ಅಧಿಕಾರಿಗಳು ಲಗ್ಗೆಯಿಡುವ ಮುನ್ನ ಅವರು ಕಳೆದ ಒಂದು ವಾರದಿಂದ ಸಾಕಷ್ಟು ಮಾಸ್ಟರ್ ಪ್ಲಾನ್ ಮಾಡಿದ್ದರೂ ಎಂಬ ಮಾತುಗಳು ಎಲ್ಲೆಡೆ ಹರದಾಡುತ್ತಿವೆ.

ಸ್ಯಾಂಡಲ್ ವುಡ್ ಗೆ ಶಾಕ್ ನೀಡುವ ಮೊದಲು ಐಟಿ ಅಧಿಕಾರಿಗಳು ನಟರು ಹಾಗೂ ನಿರ್ಮಾಪಕರ ಆದಾಯದ ಬಗ್ಗೆ ಸಮಗ್ರ ಮಾಹಿತಿಯನ್ನು ಕಲೆ ಹಾಕಿ ಸೂಕ್ತ ದಾಖಲೆಗಳ ಮಾಹಿತಿಗಳನ್ನೂ ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ.

ಐಟಿ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ ಬಳಿಕ ಕೋರ್ಟ್ ನಲ್ಲಿ ದಾಳಿ ಸಂಬಂಧ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಲು ಅನುಮತಿ ಪಡೆದಿದ್ದರು ಎನ್ನಲಾಗಿದ್ದು ಆ ಬಳಿಕ ಗುರುವಾರ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ದಾಳಿ ಮಾಡುವ ಪ್ಲಾನ್ ಮಾಡಿದ್ದರು ಎಂದು ತಿಳಿದು ಬಂದಿದೆ.

ಮೇಲಿನ ಪ್ಲಾನ್ ನಂತೆ 200 ಅಧಿಕಾರಿಗಳನ್ನು ಕಚೇರಿಗೆ ಕರೆಸಿಕೊಂಡ ಐಟಿ ಅಧಿಕಾರಿಗಳು ಖಾಸಗಿ ವಾಹನಗಳಲ್ಲಿ ಬಂದು ನಟ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್, ನಿವಾಸದ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top