fbpx
ಸಮಾಚಾರ

“ಪ್ರಧಾನಮಂತ್ರಿಯಾಗಲು ಸದ್ಯ ಮಮತಾ ಬ್ಯಾನರ್ಜಿ ಉತ್ತಮ ಅಭ್ಯರ್ಥಿ” ಪ.ಬಂಗಾಳ ಬಿಜೆಪಿ ಅಧ್ಯಕ್ಷ ಹೇಳಿಕೆ.

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮಂತ್ರಿ ಸ್ಥಾನಕ್ಕೆ ಉತ್ತಮ ಅಭ್ಯರ್ಥಿ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್​ ಘೋಷ್​ ಹೇಳಿಕೆಯನ್ನು ನೀಡಿದ್ದು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ವಿರುದ್ಧ ಕಠಿಣ ಹೋರಾಟಕ್ಕೆ ಬಿಜೆಪಿ ನಿಂತಿರುವ ಬೆನ್ನಲ್ಲೇ ರಾಜ್ಯಾಧ್ಯಕ್ಷರು ಶನಿವಾರ ಈ ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದಾರೆ.

ಮಮತಾ ಬ್ಯಾನರ್ಜಿಯವರ 64ನೇ ಜನ್ಮ ದಿನವಾದ ಶನಿವಾರ ಮಮತಾಗೆ ಶುಭಾಶಯಗಳನ್ನು ತಿಳಿಸಿರುವ ದಿಲೀಪ್ ಅವರು, “ಪ್ರಧಾನಮಂತ್ರಿ ಆಯ್ಕೆಯನ್ನು ಪಶ್ಚಿಮ ಬಂಗಾಳದಿಂದ ಮಾಡುವುದಾದರೆ, ಮಮತಾ ಅವರಿಗೆ ಉತ್ತಮ ಅವಕಾಶವಿದೆ. ಅವರು ಮುಂದಿನ ಪ್ರಧಾನಮಂತ್ರಿಗಳಾಗುವ ಕನಸು ಕಾಣುತ್ತಿದ್ದಾರೆ. ಆದ್ದರಿಂದ ಅವರಿಗೆ ಶುಭಕೋರುತ್ತೇನೆಂದು ಹೇಳಿದ್ದಾರೆ.

ನಾಲ್ಕು ದಿನಗಳ ಹಿಂದೆಯಷ್ಟೇ ಪಶ್ಚಿಮ ಬಂಗಾಳದ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್​ ಮುಖ್ಯಮಂತ್ರಿ ಮಮತಾ ಅವರನ್ನು ಮುಂದಿನ ಪ್ರಧಾನಿ ಅಭ್ಯರ್ಥಿಯಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಬಿಂಬಿಸಿತ್ತು. ಮಹಾಘಟಬಂಧನ್​ ಅಡಿಯಲ್ಲಿ ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸಿ ಗೆದ್ದರೆ, ಮಮತಾ ಕೂಡ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಪ್ರತಿಪಕ್ಷದ ನಾಯಕನೊಬ್ಬ ಮಮತಾ ಪರ ಬ್ಯಾಟ್​ ಬೀಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top