fbpx
ಸಮಾಚಾರ

ಮೇಲ್ಜಾತಿಗೂ ಶೇ. 10 ಮೀಸಲಾತಿ- ಪ್ರಧಾನಿ ಮೋದಿ ಮಾಸ್ಟರ್ ಸ್ಟ್ರೋಕ್.

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ದದ ಸಮುದಾಯಗಳ ಜನರಿಗೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡಲು ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ಸೋಮವಾರ ಸಮ್ಮತಿಸಿದೆ.

ಇಂದು ನಡೆದ ಕೇಂದ್ರ ಕ್ಯಾಬಿನೆಟ್​ ಸಭೆಯಲ್ಲಿ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ವರ್ಷಕ್ಕೆ 8 ಲಕ್ಷಕ್ಕೂ ಕಡಿಮೆ ಆದಾಯ ಇರುವ ಎಲ್ಲ ಮೇಲ್ಜಾತಿಯವರಿಗೆ ಶೇ.10 ಮೀಸಲಾತಿ ಲಭ್ಯವಾಗಲಿದೆ. ಮೋದಿ ಅವರ ಈ ನಿರ್ಧಾರ ಲೋಕಸಭಾ ಚುನಾವಣೆಯ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ.

ಮೋದಿ ಸರ್ಕಾರದ ಈ ನಿರ್ಣಯದಿಂದ ಇನ್ನು ಮುಂದಿನ ದಿನಗಳಲ್ಲಿ ಎಸ್ ಸಿ, ಎಸ್ ಟಿ, ಒಬಿಸಿ ಹೊರತಾಗಿ, ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗವರಿಗೂ ಮೀಸಲಾತಿ ಸಿಗಲಿದೆ. ಸಂವಿಧಾನದ 15 ಹಾಗೂ 16ನೇ ಪರಿಚ್ಛೇದ ತಿದ್ದುಪಡಿಗೆ ಕೇಂದ್ರ ಮುಂದಾಗಿದೆ. ಈ ಸಂಬಂಧ ತಿದ್ದುಪಡಿ ಮಸೂದೆ ಮಂಡಿಸಲಿದೆ.

ಶೇ.50ರಿಂದ ಶೇ.60ಕ್ಕೆ ಮೀಸಲಾತಿ ಪ್ರಮಾಣ ಏರಿಕೆಯಾಗಬೇಕಾಗಿದ್ದರಿಂದ ಸಂವಿಧಾನ ತಿದ್ದುಪಡಿ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಧೇಯಕ ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಮಂಡನೆಯಾಗಿ ಪಾಸ್ ಆಗಬೇಕಾಗಿದೆ. ಬಳಿಕ ರಾಷ್ಟ್ರಪತಿ ಅಂಕಿತ ಬಿದ್ದ ಮೇಲೆ ತಿದ್ದುಪಡಿ ವಿಧೇಯಕ ಜಾರಿಯಾಗಲು ಸಾಧ್ಯ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top