fbpx
ಸಮಾಚಾರ

84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಂಗೀಕರಿಸಲಾದ ನಿರ್ಣಯಗಳು ಯಾವುವು ಗೊತ್ತೇ ?

84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವಿದ್ಯಾಕೇಂದ್ರವಾದ ಧಾರವಾಡದಲ್ಲಿ ಜ.4, 5 ಹಾಗೂ 6ರಂದು ಸಾಂಗವಾಗಿ ನೆರವೇರಿತು. ಹಾವೇರಿ, ಬಳ್ಳಾರಿ, ವಿಜಯಪುರ, ಚಿಕ್ಕಮಗಳೂರು, ಕೋಲಾರ ಜಿಲ್ಲೆಗಳು ಈ ಸಮ್ಮೇಳನದ ಅತಿಥ್ಯ ವಹಿಸಿದ್ದವು ಹಾಗೂ ಈ ಭಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್​ ಕಂಬಾರ​ ಅವರನ್ನು ಆಯ್ಕೆ ಮಾಡಿರುವುದು ಗಮನಾರ್ಹವಾಗಿತ್ತು.

ಹೀಗಿರುವಾಗ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ.ಚಂದ್ರಶೇಖರ್ ಕಂಬಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರ ನೇತೃತ್ವದಲ್ಲಿ ಭಾನುವಾರದ ಸಂಜೆ ನಡೆದ ಬಹಿರಂಗ ಸಭೆಯಲ್ಲಿ ಕೆಲವು ನಿರ್ಣಯಗಳನ್ನು ಒಮ್ಮತದಿಂದ ಅಂಗೀಕರಿಸಲಾಯಿತು. ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಅವರು ಆ ನಿರ್ಣಯಗಳನ್ನು ಸಭೆಯಲ್ಲಿ ಎಲ್ಲರ ಸಮ್ಮುಖದಲ್ಲಿ ಮಂಡಿಸಿದರು. ಹಾಗಾದರೆ ಅಂಗೀಕರಿಸಲಾದ ಆ ನಿರ್ಣಯಗಳು ಯಾವುವು ಎಂದು ಮುಂದೆ ಓದೋಣ :

1 )ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿದಕ್ಕೆ ಎಲ್ಲಾ ಸಾಹಿತ್ಯ ಆಸಕ್ತರಿಗೂ ಮತ್ತು ಪದಾಧಿಕಾರಿಗಳಿಗೂ ಧನ್ಯವಾದಗಳು.

2) ರಾಷ್ಟ್ರಕವಿ ಕುವೆಂಪು ರವರು ರಚಿಸರುವ ನಾಡ ಗೀತೆಯನ್ನು ಹಾಡುವ ಅವಧಿಯನ್ನು ಗರಿಷ್ಠ 2.30 ನಿಮಿಷಗಳಿಗೆ ಸರ್ಕಾರ ನಿಗದಿಗೊಳಿಸಬೇಕು.

3) ಬರುವ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರ 1 ಸಾವಿರ ಆಂಗ್ಲ ಶಾಲೆ ತೆರೆಯುವ ನಿರ್ಧಾರವನ್ನು ಕೈ ಬಿಡಬೇಕು.

4) ಕೇಂದ್ರ ಸರ್ಕಾರದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡಬೇಕು.

5) ಎಲ್.ಕೆ.ಜಿ, ಯು.ಕೆ.ಜಿ ಸೇರಿದಂತೆ 1ರಿಂದ 7ನೇ ತರಗತಿ ವರೆಗೆ ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸಬೇಕು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top