fbpx
ಸಮಾಚಾರ

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ!

ಕರ್ನಾಟಕ ರಾಜ್ಯ ಐಸಿಎಸ್‌ಇ ಶಾಲಾ ಕನ್ನಡ ಶಿಕ್ಷಕರ ಸಂಘ ನಗರದ ಶಿಕ್ಷಕರ ಸದನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಹೌದು, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ಭರ್ತಿ ಮಾಡುವಾಗ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಶೇ. 50 ರಷ್ಟು ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸುವುದಾಗಿ ಹೇಳಿದ್ದು ಇದು ತಿಥಿ ಉಪನ್ಯಾಸಕರಿಗೆ ಖುಷಿಯನ್ನು ತಂದಿದೆ.

ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 395 ಪ್ರಾಂಶುಪಾಲರು ಹಾಗೂ 3,800 ಉಪನ್ಯಾಸಕರ ಹುದ್ದೆಗಳನ್ನು 3 ತಿಂಗಳೊಳಗೆ ಭರ್ತಿ ಮಾಡಲಾಗುವುದು ಹಾಗೂ ಈ ಸಂದರ್ಭದಲ್ಲಿ ಕಳೆದ 10 ವರ್ಷಗಳಿಂದ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಶೇ.50 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು ಎಂಬ ಸಿಹಿ ಸಮಾಚಾರವನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಕರ್ನಾಟಕ ರಾಜ್ಯ ಐಸಿಎಸ್‌ಇ ಶಾಲಾ ಕನ್ನಡ ಶಿಕ್ಷಕರ ಸಂಘ ನಗರದ ಶಿಕ್ಷಕರ ಸದನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top