fbpx
ಸಮಾಚಾರ

ಬರ ಪರಿಹಾರಕ್ಕೆ ಕೇಂದ್ರದಿಂದ ಯಾವುದೇ ಅನುದಾನ ಬಂದಿಲ್ಲ ಎಂದ ಸಿಎಂ ಹೆಚ್ ಡಿ ಕುಮಾರಸ್ವಾಮಿ

ನಿನ್ನೆ ರಾಯಚೂರಿನ ಸಿಂಧನೂರಿನಲ್ಲಿ ರಾಜ್ಯಮಟ್ಟದ ಪಶು ಮತ್ಸ್ಯ ಮೇಳ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ‌ ನೀಡಲು ಆಗಮಿಸಿದ್ದ ಮಾನ್ಯ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿಯವರು ಮಾಧ್ಯಮ ಮಿತ್ರರ ವಿವಿಧ ಪ್ರಶ್ನೆಗಳಿಗೆ ಸಮಾಧಾನಚಿತ್ತದಿಂದ ಉತ್ತರಿಸಿದರು.

ತೈಲ ಬೆಲೆ ಏರಿಕೆ ಮತ್ತು ಸುಂಕ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ :

ಮಾನ್ಯ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿಯವರು ತೈಲ ಬೆಲೆ ಏರಿಕೆ ಮತ್ತು ಸುಂಕ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ತೈಲ ಬೆಲೆಗಳನ್ನು ಹೋಲಿಸಿದರೆ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆಯಿದೆ ಎಂದು ಹೇಳಿದರು.

ಅಂತರ್ ರಾಜ್ಯ ನದಿ ಜೋಡಣೆ ಸಂಬಂಧಿಸಿದಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದ ಸಿಎಂ :

ತುಂಗಾಭದ್ರಾ ಜಲಾಶಯದಲ್ಲಿ 30 ಟಿಎಂಸಿ ಹೂಳು ತುಂಬಿಕೊಂಡಿದ್ದು, ನೀರಿನ ಸಂಗ್ರಹಣೆ ಕಡಿಮೆಯಾಗಿದೆ ಮತ್ತು ಭರ್ತಿಯಾಗುತ್ತಲೇ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದುಹೋಗುತ್ತಿರುವುದು ಗಮನಕ್ಕೆ ನಮ್ಮ ಬಂದಿದ್ದು, ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಮತ್ತು ಶಾಶ್ವತವಾಗಿ ನಮ್ಮ‌ಜನರಿಗೆ ನಿಗದಿಪಡಿಸಿದ ಪ್ರಮಾಣದ ನೀರಿನ ಸೌಕರ್ಯ ಕಲ್ಪಿಸಲು ಸ್ವಲ್ಪ ಸಮಯವಕಾಶ ಅಗತ್ಯವಿದ್ದು, ನಮ್ಮ ಸರ್ಕಾರದಿಂದ ತುಂಗಾಭದ್ರಾ ಜಲಾಶಯದ ವಿಷಯದಲ್ಲಿ ಶಾಶ್ವತ ಸೌಲಭ್ಯ ಒದಗಿಸಿಕೊಡಲಾಗುವುದು ಎಂದರು. ಅದರೊಂದಿಗೆ ದೇಶದಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಕೆಯಾಗುವ ನಿಟ್ಟಿನಲ್ಲಿ ಅಂತರ್ ರಾಜ್ಯ ನದಿ ಜೋಡಣೆ ಸೇರಿದಂತೆ ವಿವಿಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಸಹ ಎಂದರು.

ಇದರೊಂದಿಗೆ ರಾಜ್ಯದ ಬರಪೀಡಿತ ತಾಲ್ಲೂಕುಗಳಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಅನುದಾನ ಇದುವರೆಗೆ ಬಂದಿಲ್ಲ ಎಂದುಮಾನ್ಯ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿಯವರು ಅಸಮಾಧಾನ ವ್ಯಕ್ತಪಡಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top