fbpx
ಮನೋರಂಜನೆ

ಗಾಯದ ನಡುವೆಯೂ ಯಜಮಾನ ಚಿತ್ರೀಕರಣ ಮುಗಿಸಿಕೊಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್.

ಪ್ರೇಕ್ಷಕ ವಲಯದಲ್ಲಿ ನಾನಾ ಕಾರಣಗಳಿಂದ ವಿಪರೀತಿ ನಿರೀಕ್ಷೆ ಹುಟ್ಟುಹಾಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಿನ ಸಿನಿಮಾ `ಯಜಮಾನ ಮಾತಿನ ಭಾಗದ ಚಿತ್ರೀಕರಣವನ್ನು ಕಂಪ್ಲೀಟ್ ಮಾಡಿಕೊಂಡಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ.. ಚಿತ್ರದ ಟೈಟಲ್’ನಿಂದ ಹಿಡಿದು ತಾರಾಗಣದವರೆಗೆ ಎಲ್ಲದರಲ್ಲೂ ಕುತೂಹಲ ಮೂಡಿಸಿರುವ ಯಜಮಾನ ಚಿತ್ರತಂಡ ಆದಷ್ಟು ಬೇಗ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

 

 

ಕಾರು ಅಪಘಾತದಲ್ಲಿ ಕೈಗೆ ಪೆಟ್ಟು ಮಾಡಿಕೊಂಡಿದ್ದ ದರ್ಶನ್ ಅವರಿಗೆ ವೈದ್ಯರು ಕೆಲದಿನಗಳ ವಿಶ್ರಾಂತಿ ಸೂಚಿಸಿದ್ದರು.. ಆದರೆ ಗಾಯದ ಕೈ ಸುಮಾರಾಗಿ ವಾಸಿಯಾಗುತ್ತಿದ್ದಂತೆ ಚಿತ್ರೀಕರಣದಲ್ಲಿ ಪಾಲ್ಗೊಂಡು ದರ್ಶನ್ ತಮ್ಮ ಜವಾಬ್ದಾರಿಯನ್ನು ಮುಗಿಸಿಕೊಟ್ಟಿದ್ದಾರೆ.. ಪರಿಣಾಮ ಯಜಮಾನ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.. ಹೊಸ ವರ್ಷದಂದೇ ಹಾಡಿನ ಚಿತ್ರೀಕರಣದಲ್ಲಿ ದರ್ಶನ್ ಪಾಲ್ಗೊಂಡಿದ್ದರು. ಇದು ದರ್ಶನ್ ಅವರ ವೃತ್ತಿಪರತೆಗೆ ದೊಡ್ಡ ಉದಾಹರಣೆಯಾಗಿದ್ದು ಯುವ ಜನರಿಗೆ ಮಾದರಿಯಾಗಿದೆ.

ಯಜಮಾನ ಬಗ್ಗೆ.
ಬಿ ಸುರೇಶ್ ಮತ್ತು ಶೈಲಜಾ ನಾಗ್ ಅವರು ತಮ್ಮ ಮೀಡಿಯಾ ಹೌಸ್ ಕಡೆಯಿಂದ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪೊನ್ನು ಕುಮಾರ್ ಯಜಮಾನ ಚಿತ್ರದ ನಿರ್ದೇಶನದ ಹೊಣೆ ಹೊತ್ತಿದ್ದಾರೆ.. ವಿ ಹರಿಕೃಷ್ಣ ಅವರು ಸಂಗೀತ ನಿರ್ದೇಶನ ಮಾಡುತಿದ್ದರೆ ಭರ್ಜರಿ ಚೇತನ್ ಸಂಭಾಷಣೆ ಬರೆಯುತ್ತಿದ್ದಾರೆ. ದರ್ಶನ್’ಗೆ ನಾಯಕಿಯರಾಗಿ, ರಶ್ಮಿಕಾ ಮಂದಣ್ಣ ಮತ್ತು ತಾನ್ಯಾ ಹೋಪ್ ನಟಿಸಿದ್ದು ಧನಂಜಯ್ ಮತ್ತು ಸಿಂಗಂ ಖ್ಯಾತಿಯ ಥಾಕುರ್ ಅನೂಪ್ ಸಿಂಗ್ ಸೇರಿದಂತೆ ಅನೇಕ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top