fbpx
ಸಮಾಚಾರ

ಕೇಂದ್ರ ಸರ್ಕಾರಕ್ಕೆ ಭಾರೀ ಮುಖಭಂಗ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮರುನೇಮಕಕ್ಕೆ ‘ಸುಪ್ರೀಂ’ ಸೂಚನೆ.

ತಮ್ಮನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮಂಗಳವಾರ(ಜನವರಿ 08)ದಂದು ತೀರ್ಪು ನೀಡಿದೆ.. ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪಿನಿಂದಾಗಿ ಕೇಂದ್ರ ಸರ್ಕಾರಕ್ಕೆ ತೀವ್ರ ಮುಖಭಂಗ ಆಗಿದೆ.

ಕೇಂದ್ರ ಸರ್ಕಾರದ ಆದೇಶವನ್ನು ಪಕ್ಕಕ್ಕೆ ಸರಿಸಿರುವ ಸುಪ್ರೀಂಕೋರ್ಟ್, ಅಲೋಕ್ ಕುಮಾರ್ ಅವರನ್ನು ಯಾವುದೇ ಕಾರಣಕ್ಕೂ ಹುದ್ದೆಯಿಂದ ತೆಗೆಯಬಾರದು ಸಿಬಿಐ ನಿರ್ದೇಶಕರಾಗಿ ಮತ್ತೆ ಮುಂದುವರೆಯುವಂತೆ ಕೇಂದ್ರಕ್ಕೆ ಸೋಮವಾರ ಸೂಚನೆ ನೀಡಿದೆ. ವರ್ಮಾ ಅವರು ತಮ್ಮ ಅಧಿಕಾರ ಅವಧಿ ಇರುವವರೆಗೂ ನಿರ್ದೇಶಕರ ಹುದ್ದೆಯಲ್ಲಿಯೇ ಮುಂದುವರೆಯಲಿದ್ದಾರೆ ಎಂದು ಸುಪ್ರೀಂ ತಿಳಿಸಿದೆ.

ಹುದ್ದೆಯಿಂದ ಕೆಳಗಿಳಿಸುವ ಮುನ್ನ ಸಿಜೆಐ, ಪ್ರಧಾನಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಆಯ್ಕೆ ಸಮಿತಿಯಲ್ಲಿ ಕೇಂದ್ರ ಚರ್ಚೆ ನಡೆಸಬೇಕಿತ್ತು ಎಂದು ಹೇಳಿರುವ ನ್ಯಾಯಾಲಯ, ಕೇಂದ್ರ ಸರ್ಕಾರದ ಆದೇಶವನ್ನು ತಿರಸ್ಕರಿಸಿ ಮತ್ತೆ ಸಿಬಿಐ ನಿರ್ದೇಶಕ ಹುದ್ದೆಯಲ್ಲಿ ಮುಂದುವರೆಯುವಂತೆ ಅಲೋಕ್ ವರ್ಮಾ ಅವರಿಗೆ ಸೂಚಿದೆ. ಅಲ್ಲದೆ, ಸದ್ಯಕ್ಕೆ ಯಾವುದೇ ಮಹತ್ವದ ನಿರ್ಣಯ ತೆಗೆದುಕೊಳ್ಳುವಂತಿಲ್ಲ ಎಂದು ತಿಳಿಸಿದೆ.

ಏನಿದು ವಿವಾದ?:
ಕೇಂದ್ರ ತನಿಖಾ ದಳ(ಸಿಬಿಐ) ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿತ್ತು.. ಇದನ್ನು ಪ್ರಶ್ನಿಸಿ ವರ್ಮಾ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top