fbpx
ಸಮಾಚಾರ

ಯಶ್ ಮನೆಮುಂದೆ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾವು.

ರಾಕಿಂಗ್ ಸ್ಟಾರ್ ಯಶ್ ಅವರನ್ನು ನೋಡಲು ಬಿಡದ್ದಕ್ಕೆ ತನ್ನ ದೇಹಕ್ಕೆ ಬೆಂಕಿ ಹಚ್ಚಿಕೊಂಡಿದ್ದ ಅಭಿಮಾನಿ ನಿಧನ ಹೊಂದಿದ್ದಾನೆ. ಪಾವಗಡ ಮೂಲದವನಾದ ಪೀಣ್ಯ ಸಮೀಪದ ಲಗ್ಗೆರೆಯಲ್ಲಿ ನೆಲೆಸಿರುವ ರವಿ (28) ಆತ್ಮಹತ್ಯೆಗೆ ಯತ್ನಿಸಿ ಶೇ 80 ರಷ್ಟು ಸುಟ್ಟ ಗಾಯಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ.

ನೆನ್ನೆ ಯಶ್ ಹುಟ್ಟುಹಬ್ಬ ಇದ್ದುದರಿಂದ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ ಮನೆಗೆ ಆಗಮಿಸಿದರೂ ಭೇಟಿಗೆ ಅವಕಾಶ ಸಿಗದಕ್ಕೆ ಯಶ್ ನಿವಾಸದ ಮುಂಭಾಗದಲ್ಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದನು.

ಪ್ರತಿ ವರ್ಷ ಜ.8 ರಂದು ತನ್ನ ಮೆಚ್ಚಿನ ನಟನಿಗೆ ಹುಟ್ಟು ಹಬ್ಬದ ಶುಭ ಕೋರಲು ಅವರ ಮನೆಗೆ ಬರುತ್ತಿದ್ದ. ಆದರೆ ಈ ವರ್ಷ ಕನ್ನಡ ಚಿತ್ರರಂಗದ ಹಿರಿಯ ನಟ ಅಂಬರೀಷ್‌ ನಿಧನ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಜನ್ಮ ದಿನ ಆಚರಣೆಗೆ ನಿರಾಕರಿಸಿದ್ದ ಯಶ್‌, ಈ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ವಿಡಿಯೋ ಸಂದೇಶ ಮೂಲಕ ತಮ್ಮ ಅಭಿಮಾನಿಗಳಲ್ಲಿ ಶುಭ ಕೋರಲು ಮನೆಗೆ ಬರಬೇಡಿ ಎಂದು ವಿನಂತಿಸಿದ್ದರು.

ತನಗೆ ಯಶ್‌ ನೋಡಲು ಸಿಗಲಿಲ್ಲ ಎನ್ನುವ ಬೇಸರದಿಂದ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಯಶ್‌ ಮನೆಯ ಕಾವಲು ಸಿಬ್ಬಂದಿ ಆತನನ್ನು ರಕ್ಷಿಸಿದಲ್ಲದೆ ಪೊಲೀಸ್‌ ಠಾಣೆಗೆ ವಿಷಯ ಮುಟ್ಟಿಸಿದ್ದರು. ಮನೆ ಮುಂದೆ ನೆರೆದಿದ್ದ ಇತರೆ ಅಭಿಮಾನಿಗಳು ಮತ್ತು ಸ್ಥಳೀಯರು ರವಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top