fbpx
ಸಮಾಚಾರ

ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದೇನು ಗೊತ್ತಾ ?

ಆಸೀಸ್ ನಾಡಿನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಎತ್ತಿ ಹಿಡಿದಿದ್ದು 2-1ರ ಅಂತರದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ 71 ವರ್ಷಗಳ ಬಳಿಕ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಗೆಲುವನ್ನು ಸಾಧಿಸಿರುವುದು ಭಾರತದ ಕ್ರಿಕೆಟ್ ಅಭಿಮಾನಿಗಳಲ್ಲಿ ಮಂದಹಾಸವನ್ನು ಮೂಡಿಸಿದೆ.

ಅಂದಹಾಗೇ ಟೀಮ್ ಇಂಡಿಯಾದ ಈ ಸಾಧನೆಯನ್ನು ಪ್ರತಿಯೊಬ್ಬರು ಕೊಂಡಾಡುತಿದ್ದು ಗಣ್ಯ ನಾಯಕರು ಇದರಿಂದ ಏನು ಹೊರತಾಗಿಲ್ಲ. ಟೀಮ್ ಇಂಡಿಯಾ ಗೆಲುವನ್ನು ಮೆಚ್ಚಿರುವ ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ಭಾರತ ತಂಡಕ್ಕೆ ಟ್ವೀಟ್ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ.

‘ಆಸ್ಪ್ರೇಲಿಯಾ ನೆಲದಲ್ಲಿ ಚೊಚ್ಚಲ ಟೆಸ್ಟ್‌ ಸರಣಿ ಗೆದ್ದ ಕೊಹ್ಲಿ ಪಡೆಗೆ ಅಭಿನಂದನೆ ತಿಳಿಸಲು ಇಚ್ಛಿಸುತ್ತೇನೆ’ ಎಂದು ಇಮ್ರಾನ್‌ ಟ್ವೀಟ್‌ ಮಾಡಿದ್ದು . ಇದೇ ವೇಳೆ ಮಾಜಿ ವೇಗಿ ಶೋಯಿಬ್‌ ಅಖ್ತರ್‌ ಸೇರಿದಂತೆ ಇನ್ನೂ ಅನೇಕ ವಿಶ್ವ ಪ್ರಸಿದ್ಧ ಕ್ರಿಕೆಟಿಗರು ಭಾರತ ತಂಡದ ಸಾಧನೆಯನ್ನು ಕೊಂಡಾಡಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top