fbpx
ಸಮಾಚಾರ

“ರಾಮಮಂದಿರ ನಿರ್ಮಾಣ ತಡವಾಗುತ್ತಿರಲು ಕಾಂಗ್ರೆಸ್ ಕಾರಣ” ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ.

“ರಾಮಮಂದಿರ ನಿರ್ಮಾಣ ತಡವಾಗುತ್ತಿರಲು ಕಾಂಗ್ರೆಸ್ ಕಾರಣ” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​​ ಶಾ ಹೇಳಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆ ನಡೆಯುತ್ತಿದೆ. ಈ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅಮಿತ್​​ ಶಾ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

“ಅಯೋಧ್ಯೆ ಪ್ರಕರಣ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆಯಾಗುತ್ತಿದೆ. ಆದಷ್ಟು ಬೇಗನೆ ಪ್ರಕರಣ ಮುಕ್ತಾಯವಾಗಬೇಕು ಎಂದು ನಾವು ಬಯಸುತ್ತೇವೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕೆಂದು ಬಿಜೆಪಿ ಬಯಸುತ್ತದೆ.. ಆದರೆ ಕಾಂಗ್ರೆಸ್ ಪಕ್ಷದಿಂದ ರಾಮ ಮಂದಿರ ನಿರ್ಮಾಣ ವಿಳಂಬವಾಗುತ್ತಿದೆ. ಸಂವಿಧಾನದ ಮಾರ್ಗದಲ್ಲಿ ರಾಮ ಮಂದಿರ ನಿರ್ಮಾಣವನ್ನು ನಾವು ಬಯಸುತ್ತೇವೆ” ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೋಷಿಸಿದರು.

 

 

ಮುಂಬರುವ ಲೋಕಸಭೆ ಚುನಾವಣೆ ಸಿದ್ಧಾಂತಗಳ ಸಮರವಾಗಲಿದೆ ಎಂದು ವ್ಯಾಖ್ಯಾನಿಸಿದ ಷಾ, ಎರಡು ದಿವಸದ ಈ ಕಾರ್ಯಕಾರಿಣಿಯಲ್ಲಿ ಪಕ್ಷದ ಸಹಸ್ರಾರು ಕಾರ್ಯಕರ್ತರಿಗೆ ಸಾರ್ವತ್ರಿಕ ಚುನಾವಣೆಯ ಅಂತಿಮ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top