fbpx
ಸಮಾಚಾರ

ಮಾತೆ ಮಹಾದೇವಿ ಇನ್ನಿಲ್ಲ- ಬಸವಧರ್ಮ ಪೀಠಾಧ್ಯಕ್ಷೆ ಲಿಂಗೈಕ್ಯ

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರು ಗುರುವಾರ ಮಧ್ಯಾಹ್ನ ಲಿಂಗೈಕ್ಯರಾಗಿದ್ದಾರೆ. ಕಳೆದ ಎಂಟು ದಿನಗಳಿಂದ ನಗರದ ಮಣಿಪಾಲ್​ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾತೆ ಮಹಾದೇವಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರು ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.ಶ್ವಾಸಕೋಶ ಸೋಂಕಿಗೆ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಾರ್ಚ್‌ 9ರಂದು ಬೆಂಗಳೂರಿಗೆ ಕರೆ ತಂದು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ರಕ್ತದೊತ್ತಡ, ಮಧುಮೇಹ, ಮೂತ್ರಕೋಶದ ತೊಂದರೆ, ಶ್ವಾಸಕೋಶದ ಸಮಸ್ಯೆ ಸೇರಿದಂತೆ ಬಹು ಅಂಗಾಂಗಗಳ ವೈಫಲ್ಯದಿಂದ ಅವರು ಬಳಲುತ್ತಿದ್ದರು.

ಉತ್ತಮ ವಾಗ್ಮಿ, ಸಾಹಿತಿಯಾಗಿ ಪ್ರಸಿದ್ಧರಾಗಿದ್ದ ಅವರು, ಪ್ರತಿ ವರ್ಷ ಶರಣ ಸಮ್ಮೇಳನ ಆಯೋಜನೆ ಮಾಡುತ್ತಿದ್ದರು. ಕೂಡಲಸಂಗಮ, ಬಸವಕಲ್ಯಾಣದಲ್ಲಿ ಕಾರ್ಯಕ್ರಮ ಆಯೋಜಿಸಿ, ಶರಣ ಧರ್ಮ ಪ್ರಚಾರದಲ್ಲಿ ಸಕ್ರಿಯರಾಗಿದ್ದರು. ಲಿಂಗಾನಂದ ಮಹಾಸ್ವಾಮಿಗಳಿಂದ ಇಷ್ಟಲಿಂಗ ಧೀಕ್ಷೆ ಪಡೆದಿದ್ದ ಅವರು ಜನಿಸಿದ್ದು 1946ರ ಮಾರ್ಚ್ 13ರಂದು. ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಅವರು ಜನಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top