fbpx
ಸಮಾಚಾರ

ವಿಶ್ವಕಪ್​ಗೆ ಪಂತ್​ ಬದಲು ದಿನೇಶ್​ ಕಾರ್ತಿಕ್​ರನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣ ಹೇಳಿದ ನಾಯಕ ಕೊಹ್ಲಿ.

ಐಸಿಸಿ ವಿಶ್ವಕಪ್ ಟೂರ್ನಿಗೆ ಇನ್ನು ಕೇವಲ 15 ದಿನಗಳಷ್ಟೇ ಬಾಕಿ ಇದ್ದು, ಈಗಾಗಲೇ ಟೀಂ ಇಂಡಿಯಾ ಇಂಗ್ಲೆಂಡ್ ಗೆ ತೆರಳಲು ಸಜ್ಜಾಗಿ ನಿಂತಿದೆ. ಏತನ್ಮಧ್ಯೆ ಮಾಧ್ಯಮಗಳೊಂದಿಗೆ ಮಾತನಾಡಿರುವ ನಾಯಕ ವಿರಾಟ್ ಕೊಹ್ಲಿ, ಯಂಗ್ ಅಂಡ್ ಎನರ್ಜಿಟಿಕ್ ಆಟಗಾರ ರಿಷಬ್ ಪಂತ್ ಬದಲಿಗೆ ದಿನೇಶ್ ಕಾರ್ತಿಕ್ ರನ್ನು ಆಯ್ಕೆ ಮಾಡಿದ್ದೇಕೆ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ನಾಯಕ ಕೊಹ್ಲಿಯ ಮೊದಲ ಆಯ್ಕೆ. ಧೋನಿಗೆ ಗಾಯದ ಸಮಸ್ಯೆ ಕಾಡಿದರೆ ಅವರ ಬದಲು ಕಾರ್ತಿಕ್​ ಅವರನ್ನು ಕಣಕ್ಕಿಳಿಸಬಹುದು. ಕಾರ್ತಿಕ್​ ಅನುಭವಿ ಆಟಗಾರರಾಗಿದ್ದು, ವಿಕೆಟ್​ ಹಿಂದೆಯೂ ಚುರುಕಾಗಿದ್ದಾರೆ. ಜತೆಗೆ ತಂಡಕ್ಕೆ ಅಗತ್ಯವಿದ್ದಾಗ ಒತ್ತಡವನ್ನು ತಡೆದುಕೊಂಡು ಉತ್ತಮ ಆಟ ಆಡಬಲ್ಲರು. ಇದು ತಂಡದ ಆಯ್ಕೆ ಮಂಡಳಿಯ ಎಲ್ಲಾ ಸದಸ್ಯರೂ ಈ ವಿಷಯದ ಕುರಿತು ಸಹಮತ ವ್ಯಕ್ತಪಡಿಸಿದರು. ಜತೆಗೆ ತಂಡದ ಹಿತದೃಷ್ಟಿಯಿಂದ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಹ್ಲಿ ತಿಳಿಸಿದ್ದಾರೆ.

ವಿಶ್ವಕಪ್​ನಲ್ಲಿ ಪಾಲ್ಗೊಳ್ಳಲಿರುವ ಭಾರತ ತಂಡವನ್ನು ಪ್ರಕಟಿಸಲಾಗಿತ್ತು. ಯುವ ವಿಕೆಟ್​ ಕೀಪರ್​ ಬ್ಯಾಟ್ಸ್​ಮನ್​ ರಿಷಭ್​ ಪಂತ್​ ಅವರನ್ನು ಆಯ್ಕೆ ಮಾಡದೆ ಅನುಭವಿ ಆಟಗಾರ ದಿನೇಶ್​ ಕಾರ್ತಿಕ್​ರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಪಂತ್​ರನ್ನು ಆಯ್ಕೆಮಾಡದ್ದಕ್ಕೆ ಕ್ರಿಕೆಟ್​ ವಲಯದಲ್ಲಿ ತೀವ್ರ ಆಕ್ರೋಶ ಕೇಳಿಬಂದಿತ್ತು. ಈಗ ಈ ಕುರಿತು ವಿರಾಟ್​ ಕೊಹ್ಲಿ ಸ್ಪಷ್ಟನೆ ನೀಡಿದ್ದು, ದಿನೇಶ್​ ಕಾರ್ತಿಕ್​ರನ್ನು ಆಯ್ಕೆ ಮಾಡಿದ್ದು ಏಕೆ ಎಂದು ಕೊನೆಗೂ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top