fbpx
ಸಮಾಚಾರ

“ನಾನು ಸಿದ್ದರಾಮಯ್ಯ ಅವರ ಅಭಿಮಾನಿ” ಸಚಿವ ಹೆಚ್.ಡಿ ರೇವಣ್ಣ.

ಮಾಜಿ ಸಿಎಂ ಸಿದ್ದರಾಮಯ್ಯರಿಗೆ ನನ್ನ ಮೇಲೆ ಅಭಿಮಾನವಿದೆ ಮತ್ತು ಒಲವಿದೆ, ಹೀಗಾಗಿ ಸಿಎಂ ಸ್ಥಾನಕ್ಕೆ ನಾನೂ ಕೂಡ ಅರ್ಹ ಅಂತ ಟ್ವೀಟ್ ಮಾಡಿದ್ದಾರೆ ಎಂದು ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಅಭಿಪ್ರಾಯದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಹಿಂದಿನಿಂದಲೂ ಅವರು ನನ್ನ ಹಿತೈಶಿ ಹಾಗೂ ನಾನು ಸಿದ್ದರಾಮಯ್ಯನವರ ಅಭಿಮಾನಿ. ನಾನು ಸಿದ್ದರಾಮಯ್ಯ 25 ವರ್ಷದ ಗೆಳೆಯರು, 96 ರಿಂದಲೂ ಒಟ್ಟಿಗೆ ಕೆಲಸ ಮಾಡಿದ್ದೇವೆ, ಪ್ರಸ್ತುತ ಕುಮಾರಸ್ವಾಮಿ ಅವರು ಸಿಎಂ ಆಗಿರುವಾಗ ನಾನು ಸಿಎಂ ಆಗುವ ಪ್ರಶ್ನೆಯೇ ಬರುವುದಿಲ್ಲ. ಅವರು ಇರುವಾಗ ನಾವು ಪೈಪೋಟಿ ನೀಡಲು ಆಗುವುದಿಲ್ಲ ಎಂದು ರೇವಣ್ಣ ತಿಳಿಸಿದ್ದಾರೆ.

ಕುಮಾರಸ್ವಾಮಿ ಅಧಿಕಾರಕ್ಕೆ ಬಂದಾಗಿನಿಂದಲೂ ಸರ್ಕಾರ ಉರುಳಿಸಲು ಬಿಜೆಪಿ ಹಲವು ಪ್ರಯತ್ನಗಳನ್ನು ಮಾಡುತ್ತಿದೆ, ಆದರೆ ಸರ್ಕಾರ ಅವ್ಯಾವುವು ಸಫಲವಾಗುವುದಿಲ್ಲ, ಕುಮಾರಸ್ವಾಮಿ ಅವರು ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ರೇವಣ್ಣ ಹೇಳಿದರು.

ಸಿದ್ದರಾಮಯ್ಯ ಹೇಳಿದ್ದೇನು?
ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top