fbpx
ಸಮಾಚಾರ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಯ್ತು ‘ನಿಖಿಲ್ ಎಲ್ಲಿದಿಯಪ್ಪಾ’ ಸಿನಿಮಾ ಪೋಸ್ಟರ್

‘ನಿಖಿಲ್ ಎಲ್ಲಿದಿಯಪ್ಪಾ’ ಹೀಗೊಂದು ಡೈಲಾಗ್ ದೇಶದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲೂ ವೈರಲ್ ಆಗಿದ್ದು ಹಳೆಯ ವಿಚಾರ. ಇದೇ ಡೈಲಾಗ್ ಈಗ ಸಿನಿಮಾ ರೂಪ ಪಡೆದುಕೊಳ್ಳುತ್ತಿದೆ. ‘ನಿಖಿಲ್ ಎಲ್ಲಿದ್ದೀಯಪ್ಪಾ’ ಟೈಟಲ್ ನಲ್ಲಿ ಸಿನಿಮಾ ಮಾಡುತ್ತೇನೆ ಎಂಬ ನಿಖಿಲ್ ಹೇಳಿಕೆಯ ಬೆನ್ನಲ್ಲೇ ಅಭಿಮಾನಿಗಳು ಮತ್ತು ಬೆಂಬಲಿಗರು ಖುಷಿಯಾಗಿದ್ದು, ಇದೀಗ ಸಿನಿಮಾದ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಪ್ತಗಿರಿ ಕ್ರಿಯೇಷನ್ಸ್, ಕೃಷ್ಣೇಗೌಡ ನಿರ್ಮಾಪಕ, ಅಶೋಕ್ ಕೆ. ಕಡಬ ನಿರ್ದೇಶನ ಎಂದು ಪೋಸ್ಟರ್ ರಿಲೀಸ್ ಮಾಡಲಾಗಿದೆ. ಅದರಲ್ಲಿ ಇಂಡಿಯಾ ಗೇಟ್ ಬಳಿ ನಿಖಿಲ್ ಕುಮಾರಸ್ವಾಮಿ ನಡೆದು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಸಂಸತ್ತಿನ ಪೋಟೋ ಹಾಕಿ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.

ಈ ಮೂಲಕ ನಿಖಿಲ್ ಕುಮಾರಸ್ವಾಮಿ ಅವರು ಇಂಡಿಯಾ ಗೇಟ್‍ನಿಂದ ಸಂಸತ್ತಿಗೆ ಹೋಗುತ್ತಿದ್ದಾರೆ ಎಂಬಂತೆ ಬಿಂಬಿಸಿ ಸಿನಿಮಾ ಪೋಸ್ಟರ್ ತಯಾರು ಮಾಡಿದ್ದಾರೆ. ಇದೀಗ ಈ ಪೋಸ್ಟರ್ ಸಾಮಾಜಿಕ ಜಾಲತಾಣಗಲ್ಲಿ ಹರಿದಾಡುತ್ತಿದೆ.

ಚಿತ್ರಕ್ಕೆ ಎ.ಟಿ.ರವೀಶ್‌ ಅವರು ಸಂಗೀತ ನೀಡುತ್ತಿದ್ದಾರೆ. ಸಿ.ಡಿ.ರಾಜು ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಸದ್ಯಕ್ಕೆ ಇದು ಪೋಸ್ಟರ್‌ನಲ್ಲಿರುವ ನಿರ್ಮಾಪಕ, ನಿರ್ದೇಶಕ ಹಾಗು ತಂತ್ರಜ್ಞರ ಹೆಸರು. ಉಳಿದಂತೆ ಚಿತ್ರದ ತಾರಾಬಳಗದಲ್ಲಿ ಯಾರೆಲ್ಲಾ ಇರುತ್ತಾರೆ. ಚಿತ್ರೀಕರಣ ಯಾವಾಗ ಶುರುವಾಗಲಿದೆ ಎಂಬ ಇತ್ಯಾದಿ ಮಾಹಿತಿ ಇಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top