fbpx
ಸಮಾಚಾರ

ಗೋಡ್ಸೆ ಪರ ಹೇಳಿಕೆ- ಸಾದ್ವಿ ಪ್ರಗ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ ಮೋದಿ.

. ಬುಧವಾರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದ ಸಾಧ್ವಿ ಪ್ರಗ್ಯಾ ಸಿಂಗ್, “ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆಗೈದ ನಾಥೂರಾಮ ಗೋಡ್ಸೆಯನ್ನು ದೇಶಭಕ್ತ,” ಎಂದು ಕೊಂಡಾಡಿದ್ದರು. ಇವರ ಈ ಹೇಳಿಕೆಗೆ ದೇಶದಾದ್ಯಂತ ಕಟು ಟೀಕೆಗಳು ವ್ಯಕ್ತವಾಗಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿ ಮಾತ್ರ ಈ ಕುರಿತು ತುಟಿ ಬಿಚ್ಚಿರಲಿಲ್ಲ. ಆದರೆ, ಈಗ ಕೊನೆಗೂ ಅವರು ಮೌನ ಮುರಿದಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಭೋಪಾಲ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಬಣ್ಣಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.

ಶುಕ್ರವಾರ ಸಾಧ್ವಿ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡಿರುವ ಮೋದಿ, “ಮಹಾತ್ಮ ಗಾಂಧೀಜಿ ಈ ದೇಶದ ಹೆಮ್ಮೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಬಾಪೂಜಿಯನ್ನು ಅವಮಾನಿಸುವ ಇಂತಹ ಹೇಳಿಕೆ ನೀಡಿದ್ದು ಅಕ್ಷಮ್ಯ ಅಪರಾಧ. ಗಾಂಧಿ ಅಥವಾ ನಾಥೂರಾಮ್ ಗೋಡ್ಸೆ ಕುರಿತು ಪ್ರಜ್ಞಾ ನೀಡಿರುವ ಹೇಳಿಕೆ ಕೆಟ್ಟ ಅಭಿರುಚಿಯಿಂದ ಕೂಡಿದ್ದಲ್ಲದೆ ಸಮಾಜಕ್ಕೆ ಹಾನಿಕಾರಕ. ಹೇಳಿಕೆ ಕುರಿತು ಪ್ರಜ್ಞಾ ಕ್ಷಮೆಯಾಚಿಸಿದ್ದರೂ ಆಕೆಯನ್ನು ಪೂರ್ತಿಯಾಗಿ ಕ್ಷಮಿಸುವುದು ನನ್ನಿಂದ ಸಾಧ್ಯವಿಲ್ಲ’ ಎಂದು ಮೋದಿ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top