fbpx
ಸಮಾಚಾರ

ಗೋಡ್ಸೆ ಪರ ಹೇಳಿಕೆ: ಅನಂತ್ ಹೆಗಡೆ, ಪ್ರಗ್ಯಾ, ನಳೀನ್ ವಿರುದ್ಧ ನೋಟಿಸ್ ಜಾರಿಗೆ ಅಮಿತ್ ಶಾ ಆದೇಶ.

ನಾಥೂರಾಮ್ ಗೋಡ್ಸೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಮೂವರು ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಂಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 10ದಿನಗಳೊಳಗೆ ಉತ್ತರಿಸುವಂತೆ ಸೂಚನೆ ನೀಡಿದ್ದಾರೆ. 10 ದಿನಗಳ ಒಳಗೆ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ. ಅಲ್ಲದೆ, ಈ ಹೇಳಿಕೆಗಳು ಅವರ ವೈಯಕ್ತಿಕ ಹೇಳಿಕೆಗಳೇ ಹೊರತು ಪಕ್ಷಕ್ಕೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಬಿಜೆಪಿ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಪ್ರಜ್ಞಾಸಿಂಗ್ ಸಿಂಗ್ ಠಾಕೂರ್ ಹಾಗೂ ಸಂಸದರಾದ ಅನಂತ್ ಕುಮಾರ್ ಹೆಗ್ಡೆ, ನಳಿನ್ ಕುಮಾರ್ ಕಟೀಲ್ ಅವರು ಗೋಡ್ಸೆ ಕುರಿತ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲಿ ಬಿಜೆಪಿ ಭಾರೀ ಟೀಕೆಗಳನ್ನು ಎದುರಿಸಿದೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಮುಖಂಡರ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದಾರೆ.

ಬಿಜೆಪಿ ನಾಯಕರಾದ ಕೇಂದ್ರ ಸಚಿವರಾದ ಅನಂತ್ ಕುಮಾರ್ ಹೆಗಡೆ, ನಳೀನ್ ಕುಮಾರ್ ಕಟೀಲ್ ಮತ್ತು ಭೋಪಾಲ್ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ನಾಥೂರಾಮ್ ಗೋಡ್ಸೆ ಬಗ್ಗೆ ಹೇಳಿಕೆಗಳನ್ನು ನೀಡಿ ಬಳಿಕ ಕ್ಷಮೆಯಾಚಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top