fbpx
ಸಮಾಚಾರ

ಧರ್ಮಸ್ಥಳ ಪ್ರವಾಸ ಮುಂದೂಡಿ- ಭಕ್ತಾದಿಗಳಲ್ಲಿ ವೀರೇಂದ್ರ ಹೆಗ್ಗಡೆ ಮನವಿ.

ಈ ಬಾರಿ ಬಿರುಬೇಸಿಗೆಯಿಂದಾಗಿ ರಾಜ್ಯಾದ್ಯಂತ ಭೀಕರ ಬರ ಪರಿಸ್ಥಿತಿ ತಲೆದೋರಿದೆ. ಕೆಲ ವರ್ಷಗಳ ಹಿಂದಿನವರೆಗೂ ಮಳೆಯಿಂದ ಗಿಜಿಗುಡುತ್ತಿದ್ದ ಮಲೆನಾಡಿನಲ್ಲೂ ಈಗ ನೀರಿಗೆ ಹಾಹಾಕಾರ ಶುರುವಾಗಿದೆ.ಇನ್ನು ಧರ್ಮಸ್ಥಳದಲ್ಲಿ ಹರಿಯುವ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀರಾ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಬರಬೇಕೆನ್ನುವ ಭಕ್ತರು ತಮ್ಮ ಪ್ರವಾಸವನ್ನು ಕೆಲ ದಿನಗಳ ಕಾಲ ಮುಂದೂಡಬೇಕೆಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡಿದ್ದಾರೆ.

 

 

ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ‘ಬೇಸಿಗೆ ಬಿಸಿಲಿನಿಂದ ದೇಶಾದ್ಯಂತ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜನತೆ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಈಗಾಗಲೇ ರೇಶನಿಂಗ್‌ ಮೂಲಕ ಕುಡಿಯುವ ನೀರನ್ನು ಜಿಲ್ಲಾಡಳಿತ ನೀಡುತ್ತಿರುವುದೇ ಇದಕ್ಕೆ ಸಾಕ್ಷಿ. ಧರ್ಮಸ್ಥಳ ಕ್ಷೇತ್ರದಲ್ಲೂ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಜತೆಗೆ ನೇತ್ರಾವತಿ ನದಿಯಲ್ಲೂ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗುತ್ತಿದೆ.

ಭಕ್ತರಿಗೆ ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನೀರಿನ ಅಭಾವ ಉಂಟಾಗಿದೆ, ಇನ್ನೂ ದೇವಸ್ಥಾನದ ವಸತಿ ಗೃಹಗಳಿಗೂ ಹೆಚ್ಚಿನ ನೀರು ಖರ್ಚಾಗುತ್ತದೆ. ಆದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳು ಕೆಲವು ದಿನಗಳ ಮಟ್ಟಿಗೆ ತಮ್ಮ ಯಾತ್ರೆಯನ್ನು ಮುಂದೂಡುವಂತೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹಗ್ಗಡೆ ಅವರು ಮನವಿ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top