fbpx
ಸಮಾಚಾರ

“15 ದಿನದಲ್ಲಿ ಮಳೆ ಬರದಿದ್ದರೆ ದೇವರ ಅಭಿಷೇಕಕ್ಕೂ ನೀರು ಇರೋದಿಲ್ಲ” ವೀರೇಂದ್ರ ಹೆಗ್ಗಡೆ ಕಳವಳ.

ಮುಂದಿನ 15 ದಿನಗಳಲ್ಲಿ ಮಳೆ ಬಾರದಿದ್ದರೆ ಮಂಜುನಾಥ ಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ.. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿರುವ ಅವರು “ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಿಂಡಿ ಅಣೆಕಟ್ಟೆಯಲ್ಲಿ ಸ್ವಲ್ಪ ನೀರಿದೆ. ತೀರ್ಥದ ಗುಂಡಿಯಲ್ಲಿ ಅಲ್ಪ ಪ್ರಮಾಣದ ನೀರಿದೆ. ತೀರ್ಥದ ಗುಂಡಿಯಲ್ಲಿ ನಾಲ್ಕು ಅಡಿ ಕಡಿಮೆ ಆಗಿದೆ. ಪ್ರಸ್ತುತ ಸ್ವಾಮಿಯ ಅಭಿಷೇಕಕ್ಕೆ ನೀರಿನ ತೊಂದರೆ ಇಲ್ಲ. ಆದರೆ, ಮುಂದಿನ 15 ದಿನಗಳಲ್ಲಿ ಮಳೆ ಬರದಿದ್ದರೆ ಮಂಜುನಾಥ ಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲದಂತಾಗಬಹುದು. ಈ ಹಿಂದೆಯೂ ಹೀಗೆ ಆಗಿತ್ತು. ಆದರೆ, ಇಷ್ಟು ತೀವ್ರ ಪ್ರಮಾಣದಲ್ಲಿ ಬರ ಕಾಡಿರಲಿಲ್ಲ ಎಂದು ಧರ್ಮಾಧಿಕಾರಿಗಳು ತಿಳಿಸಿದ್ದಾರೆ.

ನಮ್ಮ ವಸತಿಯಲ್ಲಿ ಇರುವವರಿಗೆ ಶೌಚಾಲಯದಲ್ಲಿ ನೀರು ಕೊಡಲೇಬೇಕು. ಶಾಲೆಗಳಿಗೆ ರಜೆ ಇರುವುದರಿಂದ ಎಲ್ಲರೂ ಇಲ್ಲಿ ಬರುತ್ತಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಇಲ್ಲಿ ಬಂದರೂ ಸಾಕಷ್ಟು ನೀರು ಬೇಕಾಗುತ್ತದೆ. ಹಾಗಾಗಿ ಧರ್ಮಸ್ಥಳಕ್ಕೆ ಈಗಲೇ ಯಾರೂ ಬರಬೇಡಿ ಎಂದು ವಿನಂತಿ ಮಾಡುತ್ತಿದ್ದೇನೆ ಎಂದರು.

ಅಂದಹಾಗೆ ಧರ್ಮಸ್ಥಳದಲ್ಲಿ ನೀರಿನ ಅಭಾವ ಎದುರಾಗಿರುವುದರಿಂದ ಭಕ್ತಾದಿಗಳು ತಮ್ಮ ಪ್ರವಾಸವನ್ನು ಕೆಲವು ದಿನ ಮುಂದೂಡಿ ಸಹಕರಿಸುವಂತೆ ವೀರೇಂದ್ರ ಹೆಗ್ಗಡೆಯವರು ನಿನ್ನೆ ಮನವಿ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top