fbpx
ಸಮಾಚಾರ

ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ, ಪರಮೇಶ್ವರ್.

ಇಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಭಾಗಿಯಾಗಲಿದ್ದಾರೆ.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕೋರಿ ಪ್ರಧಾನಿ ಕಚೇರಿಯಿಂದ ಸಿಎಂ ಕುಮಾರಸ್ವಾಮಿ ಅವರಿಗೆ ಮಂಗಳವಾರ ಅಧಿಕೃತ ಆಮಂತ್ರಣ ಬಂದಿದ್ದು, ಮೇ 30ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದು, ಸಂಜೆ 7ಕ್ಕೆ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದುವರೆಗೂ ಬಹಳ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಹ ಮೋದಿ ಪ್ರಮಾಣ ಸಮಾರಂಭಕ್ಕೆ ಹೋಗುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತು ನೂತನವಾಗಿ ಆಯ್ಕೆಯಾದ ಸಂಸದರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಸೇರಿದಂತೆ ಹಲವು ಗಣ್ಯರು ಭಾಗವಹಿಸುವ ಸಾಧ್ಯತೆಗಳಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top