fbpx
ಸಮಾಚಾರ

ಅಮಿತ್ ಶಾ ಸಚಿವರಾದರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಯಾರಾಗುತ್ತಾರೆ?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಾಳೆ (ಗುರುವಾರ) ಮೋದಿ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ. ಹಿನ್ನೆಲೆಯಲ್ಲಿ ಮುಂದಿನ ಬಜೆಪಿ ಸಾರಥಿ ಯಾರು ಎನ್ನುವುದು ಭಾರೀ ಕುತೂಹಲ ಮೂಡಿಸಿದೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮ ಕಮಲ ಪಡೆಯಲ್ಲಿದೆ. ಹಿನ್ನೆಲೆಯಲ್ಲಿ ಬಿಜೆಪಿ ಹೊಸ ಸಾರಥಿ ಯಾರು ಎನ್ನುವ ಕುತೂಹಲ ಕಾರ್ಯಕರ್ತರಲ್ಲಿ ಮೂಡಿಸಿದೆ.

ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ತತ್ವದ ಅಡಿ, ಮೇಲಾಗಿ ಅಮಿತ್ ಶಾ ಅವರು ಮೂರು ವರ್ಷಗಳ ಅಧಿಕಾರಾವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೊಸ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ. ಹೀಗಾಗಿ ಅಮಿತ್ ಶಾ ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಪ್ರಮುಖವಾಗಿ ಬಿಜೆಪಿ ಹಿರಿಯ ನಾಯಕರಾದ ಜೆ ಪಿ ನಡ್ಡಾ, ಧರ್ಮೇಂದ್ರ ಪ್ರಧಾನ್, ನಿತಿನ್ ಗಡ್ಕರಿ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.

ಇನ್ನು ಅಮಿತ್ ಶಾ ಅವರಿಂದ ತೆರವಾಗಲಿರುವ ಬಿಜೆಪಿ ರಾಷ್ಟ್ರಾದ್ಯಕ್ಷ ಸ್ಥಾನಕ್ಕೆ ಉಭಯ ನಾಯಕರಿಗೂ ನಿಷ್ಠರಾಗಿರುವ ಮುಖಂಡರನ್ನೇ ಆಯ್ಕೆ ಮಾಡುವ ಸಾಧ್ಯತೆ ಇನ್ನಲಾಗಿದೆ. ಹೀಗಾಗಿ ಈ ಮೂವರೂ ಮೋದಿ-ಷಾಗೆ ಆಪ್ತರಾಗಿರುವುದರಿಂದ ಅವರ ಸೂಚನೆ, ನಿರ್ದೇಶನಗಳಂತೆ ಕಾರ್ಯನಿರ್ವಹಿಸಬಲ್ಲರು. ಇದೇ ಕಾರಣಕ್ಕೆ ಈ ಮೂರು ಹೆಸರುಗಳು ಬಿಜೆಪಿ ಅಧ್ಯಕ್ಷ ಗಾದಿಗೆ ಬಲವಾಗಿ ಕೇಳಿ ಬರುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top