fbpx
ಸಮಾಚಾರ

‘ಟ್ರೋಲ್ ಮಗಾ’ ಪೇಜ್ ಅಡ್ಮಿನ್‌ಗಾಗಿ ಪೋಲೀಸರ ಹುಡುಕಾಟ

‘ಟ್ರೋಲ್‌ ಮಗ’ ಹೆಸರಿನ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ನಿರಂತರವಾಗಿ ಜೆಡಿಎಸ್‌ ಪಕ್ಷದ ಮತ್ತು ಜೆಡಿಎಸ್ ಮುಖಂಡರ ವಿರುದ್ಧ ಮಾನಹಾನಿಯಾಗುವಂತಹ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಪಕ್ಷದ ಕಾರ್ಯದರ್ಶಿ ಪ್ರದೀಪ್‌ ಕುಮಾರ್‌ ಶ್ರೀರಾಮಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

‘ಜೆಡಿಎಸ್‌ ವರಿಷ್ಠರಾದ ಎಚ್‌.ಡಿ ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ, ಮಾನಹಾನಿ ಮಾಡುವಂತೆ ಪೋಸ್ಟ್‌ಗಳನ್ನು ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಮುಂತಾದ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ಹರಿಬಿಡಲಾಗುತ್ತಿದೆ. ಅಡ್ಮಿನ್‌ ಜಯಕಾಂತ್‌ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು,” ಎಂದು ದೂರಿನಲ್ಲಿ ಪ್ರದೀಪ್‌ ಕೋರಿದ್ದಾರೆ.

ಆದರೆ ಜಯಕಾಂತ್ ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ಅವರು ಅಡ್ಮಿನ್ ಅಲ್ಲವೆಂಬುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರೊಲ್ ಮಗ ಪೇಜ್ ನ ಅಡ್ಮಿನ್ ಯಾರು ಎಂಬ ಮಾಹಿತಿ ಸದ್ಯಕ್ಕೆ ತಿಳಿದುಬಂದಿಲ್ಲ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಸೈಬರ್ ಕ್ರೈಂ ಪೊಲೀಸರ ನೆರವು ಪಡೆಯುತ್ತಿದ್ದೇವೆ. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top