fbpx
ಸಮಾಚಾರ

ಮುಖ್ಯಮಂತ್ರಿ ಕುಮಾರಸ್ವಾಮಿಗೆ ಧನ್ಯವಾದ ತಿಳಿಸಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ.

ಧರ್ಮಸ್ಥಳದಲ್ಲಿ ತಲೆದೋರಿದ್ದ ನೀರಿನ ಸಮಸ್ಯೆಗೆ ಸರ್ಕಾರ ತತ್​ಕ್ಷಣದ ಕ್ರಮ ತೆಗೆದುಕೊಳ್ಳುವಂತೆ ಸ್ಪಂದಿಸಿದ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪತ್ರ ಬರೆದು ಕೃತಜ್ಞತೆ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವ ಕಂಡು ಬಂದ ತಕ್ಷಣ ನಿಮ್ಮ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಜಲವಾಹಿನಿ ಮಂಡಳಿ ಮತ್ತು ಸಣ್ಣ ನೀರಾವರಿ ಯೋಜನೆಯ ಅಧಿಕಾರಿಗಳು ಧರ್ಮಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನ ಗಮನಿಸಿ ಸರ್ಕಾರಕ್ಕೆ ವರದಿ ನೀಡಿದ್ದಾರೆ.

 

 

ನಮ್ಮ ಕೋರಿಕೆಯಂತೆ ಕುಡಿಯುವ ನೀರಿನ ಕೊರತೆ ಸಮಸ್ಯೆಗೆ ಪರಿಹಾರವಾಗಿ ನೇತ್ರಾವತಿ ಮತ್ತು ನೆರಿಯ ನದಿಗೆ 2 ಕಿಂಡಿ ಅಣೆಕಟ್ಟು ನಿರ್ಮಿಸಲು 7 ಕೋಟಿ ಮಂಜೂರು ಮಾಡುವುದು ಸಂತೋಷವಾಗಿದೆ. ಇದೇ ಸಂದರ್ಭದಲ್ಲಿ ಬೆಂಬಲ ನೀಡಿದ ರಾಜ್ಯದ ಜನತೆಗೆ ಕೃತ್ಯಜ್ಞತೆಗಳು, ಮಂಜುನಾಥ ಸ್ವಾಮಿ ನಿಮಗೆ ದೀರ್ಘಾಯುರಾರೋಗ್ಯ ಸಕಲ ಸನ್ಮಂಗಲವನ್ನುಂಟು ಮಾಡಲಿ ಹಾಗೂ ನಿಮ್ಮ ದಕ್ಷ ನೇತೃತ್ವದಲ್ಲಿ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸುವಂತೆ ಹರಸಲೆಂದು ಪ್ರಾರ್ಥನೆ ಸಲ್ಲಿಸುತ್ತೇನೆ ಪತ್ರದಲ್ಲಿ ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ ನೀರಿನ ಅಭಾವ:
ಇತ್ತೀಚಿಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ಹೆಗ್ಗಡೆಯವರು, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೂಡ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀವ್ರ ರೀತಿಯಲ್ಲಿ ಕಡಿಮೆಯಾಗುತ್ತಿದೆ. ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತದೆ. ಆದ್ದರಿಂದ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top