fbpx
ಸಮಾಚಾರ

ಪೊಲೀಸ್ ಕಸ್ಟಡಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ.

ಪದೇ ಪದೇ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಸಂಜೆವರೆಗೂ ಪೊಲೀಸ್ ವಶಕ್ಕೆ ನೀಡಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಹಲವು ಬಾರಿ ರೇಣುಕಾಚಾರ್ಯ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿಯಾಗಿದ್ದರೂ ರೇಣುಕಾಚಾರ್ಯ ವಿಚಾರಣೆಗೆ ಗೈರು ಹಾಜರಿ ಹಾಕುತ್ತಿದ್ದರು.

ಇಂದು ಬೆಳಗ್ಗೆ ರೇಣುಕಾಚಾರ್ಯ ತಮ್ಮ ಮೇಲಿರುವ ಜಾಮೀನು ರಹಿತ ವಾರೆಂಟ್ (ಎನ್‍ಬಿಡಬ್ಲು) ರೀಕಾಲ್ ಮಾಡಿಸಲು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ನ್ಯಾಯಾಧೀಶರು ಪದೇ ಪದೇ ವಿಚಾರಣೆಗೆ ಗೈರು ಆಗಿದ್ದಕ್ಕೆ ಇಂದು ಸಂಜೆಯವರೆಗೆ ರೇಣುಕಾಚಾರ್ಯ ಕೋರ್ಟ್‍ನಲ್ಲೇ ಇರಬೇಕು ನ್ಯಾ. ರಾಮಚಂದ್ರ ಡಿ. ಹುದ್ದಾರ್ ಆದೇಶಿಸಿದ್ದಾರೆ.

ಕಳೆದ ವರ್ಷ ದಾವಣಗೆರೆ ಜಿಲ್ಲೆಯ ರೈತರಿಗೆ ನೀರೊದಗಿಸುವ ಭದ್ರಾ ಡ್ಯಾಮ್‍ನಿಂದ ನೀರು ಹರಿಸುವಂತೆ ಶಿವಮೊಗ್ಗ ಜಿಲ್ಲೆ ಮಲವಗೊಪ್ಪ ಕಾಡಾ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ರೈತರ ಜತೆಗೂಡಿ ರಸ್ತೆ ತಡೆಯನ್ನು ನಡೆಸಿದ್ದರಿಂದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಜಟಾಪಟಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಸೇರಿದಂತೆ ಅನೇಕರ ವಿರುದ್ಧ ದೂರು ದಾಖಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top