fbpx
ಸಮಾಚಾರ

ಶೂಟಿಂಗ್ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ಕಾನ್ಸ್‌ಟೇಬಲ್ ಸರೋಜಾ.

ಟಗರು ಸಿನಿಮಾದಲ್ಲಿ ಕಾನ್ಸ್ ಟೇಬಲ್ ಸರೋಜಾ ಪಾತ್ರದಲ್ಲಿ ನಟಿಸಿ ಖ್ಯಾತಿ ಗಳಿಸಿಕೊಂಡಿದ್ದ ನಟಿ ತ್ರಿವೇಣಿ ಚಿತ್ರೀಕರಣದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾರೆ. ನಿರ್ದೇಶಕ ರತ್ನ್ ತೀರ್ಥ ನಿರ್ದೇಶಿಸುತ್ತಿರುವ ‘ಅಲ್ಲೇ ಡ್ರಾ ಅಲ್ಲೇ ಬಹುಮಾನ’ ಹಾರರ್ ಸಿನಿಮಾದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ.

ಸಕಲೇಶಪುರದಲ್ಲಿ ನಡೆಯುತ್ತಿದ್ದ ‘ಅಲ್ಲೆ ಡ್ರಾ ಅಲ್ಲೆ ಬಹುಮಾನ’ ಚಿತ್ರದ ಶೂಟಿಂಗ್ ನಡೆಯುತ್ತಿದ್ದು ಈ ವೇಳೆ ಇದ್ದಕ್ಕಿದ್ದಂತೆ ನಟನೆ ಮಾಡುತ್ತಿದ್ದಾಗಲೇ ತ್ರಿವೇಣಿ ಕುಸಿದು ಬಿದ್ದಿದ್ದಾರೆ. ತಕ್ಷಣ ಚಿತ್ರತಂಡ ಸ್ಥಳದಲ್ಲಿಯೇ ಅವರನ್ನು ಆರೈಕೆ ಮಾಡಿದ್ದಾರೆ. ಸದ್ಯಕ್ಕೆ ತ್ರಿವೇಣಿ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

‘ಅಲ್ಲೆ ಡ್ರಾ ಅಲ್ಲೆ ಬಹುಮಾನ’ ಚಿತ್ರ ಹಾರರ್ ಕಥೆಯನ್ನ ಹೊಂದಿರುವ ಚಿತ್ರವಾಗಿದ್ದರಿಂದ ಸಹಜವಾಗಿ ಚಿತ್ರತಂಡ ಅಚ್ಚರಿಯಾಗಿದೆ ಎನ್ನಲಾಗಿದೆ. ಈ ಸಿನಿಮಾ ಜನನಿ ಫಿಲಂಸ್ ಲಾಂಛನದಡಿ ನಿರ್ಮಾಣವಾಗುತ್ತಿದ್ದು, ಬಿಜಿ ಪ್ರಶಾಂತ್ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ತ್ರಿವೇಣಿ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದು, ಶೌರ್ಯ ನಾಯಕನಾಗಿ ನಟಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top