fbpx
ಸಮಾಚಾರ

ಪಾಕ್‌ನ ಹೀನಾಯ ಸೋಲನ್ನು ಮೈದಾನದಲ್ಲೇ ಸಂಭ್ರಮಿಸಿದ ಟೀಂ ಇಂಡಿಯಾ ಅಭಿಮಾನಿಗಳು- ವಿಡಿಯೋ ವೈರಲ್.

ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಭಾರಿ ಸೋಲಿನ ಮುಖಭಂಗ ಅನುಭವಿಸಿದೆ. ಏತನ್ಮಧ್ಯೆ ಭಾರತದ ಅಭಿಮಾನಿಗಳು ಟೀಂ ಇಂಡಿಯಾ ಜೆರ್ಸಿ ಧರಿಸಿ ಮೈದಾನದಲ್ಲಿಯೇ ಪಾಕಿಸ್ತಾನದ ಸೋಲನ್ನು ಸಂಭ್ರಮಿಸಿದ್ದಾರೆ. ಭಾರತದ ಅಭಿಮಾನಿಗಳು ಮೈದಾನದಲ್ಲೇ ಟೀಂ ಇಂಡಿಯಾ ಜೆರ್ಸಿ ಧರಿಸಿ ಪಾಕಿಸ್ತಾನದ ಸೋಲು ಸಂಭ್ರಮಿಸುತ್ತಿರುವ ಫೋಟೋಗಳು ವೈರಲ್ ಆಗುತ್ತಿದೆ.

 


ವೆಸ್ಟ್‌ಇಂಡೀಸ್ ವಿರುದ್ಧ ಬರಿ 105 ರನ್‌ಗಳಿಗೆ ಆಲೌಟಾಗಿರುವ ಪಾಕ್ ತಮ್ಮ ವಿಶ್ವಕಪ್ ಇತಿಹಾಸದಲ್ಲೇ ಎರಡನೇ ಅತಿ ಕನಿಷ್ಠ ಮೊತ್ತಕ್ಕೆ ಆಲ್ ಔಟ್ ಆಗಿತ್ತು. ಬಳಿಕ ಗುರಿ ಬೆನ್ನಟ್ಟಿದ ವಿಂಡೀಸ್ 13.4 ಓವರ್‌ಗಳಲ್ಲೇ ಮೂರು ವಿಕೆಟ್ ನಷ್ಟಕ್ಕೆ ಪಂದ್ಯ ಮುಗಿಸಿತ್ತು.

ಕಳಪೆ ಪ್ರದರ್ಶನ ನೀಡಿರುವ ಪಾಕ್ ವಿರುದ್ಧ ಟ್ವಿಟರ್‌ನಲ್ಲಿ ಭಾರಿ ಟ್ರೋಲ್‌ಗಳ ಸುರಿಮಳೆಯಾಗುತ್ತಿದೆ. ಕ್ರಿಕೆಟ್ ಅಭಿಮಾನಿಗಳು ಪಾಕ್ ಕೆಟ್ಟ ಪ್ರದರ್ಶನವನ್ನು ಛೇಡಿಸಿದ್ದಾರೆ. ವಿಶ್ವಕಪ್‍ನಂತಹ ದೊಡ್ಡ ಟೂರ್ನಿಗಳಲ್ಲಿ ತಮ್ಮ ತಂಡ ಹೀಗೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದ್ದನ್ನು ಕಂಡ ಪಾಕ್ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top