fbpx
ಸಮಾಚಾರ

ಸರ್ಕಾರೀ ಶಾಲೆಗಳಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ.

ಗ್ರಾಮ ವಾಸ್ತವ್ಯದ ಮೂಲಕ ಜನಮನ ಗೆದ್ದಿದ್ದ ಸಿಎಂ ಎಚ್‌ಡಿ ಕುಮಾರಸ್ವಾಮಿ ಇದೀಗ ಮತ್ತೆ ಗ್ರಾಮ ವಾಸ್ತವ್ಯ ಮಾಡಲು ಮುಂದಾಗಿದ್ದಾರೆ. ಆದರೆ ಈ ಬಾರಿ ಸರಕಾರಿ ಶಾಲೆಗಳಲ್ಲಿ ತಮ್ಮ ಗ್ರಾಮ ವಾಸ್ತವ್ಯ ಪ್ರಾರಂಭವಾಗುವುದಾಗಿ ಸಿಎಂ ತಿಳಿಸಿದ್ದಾರೆ.

ಈ ಬಗ್ಗೆ ಬಗ್ಗೆ ತಮ್ಮ ಅಧಿಕೃತ ಟ್ವೀಟರ್‌ ಖಾತೆಯಲ್ಲಿ ತಿಳಿಸಿದ್ದಾರೆ. ’ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರ್ಕಾರದ ಕಾರ್ಯವೈಖರಿ ತಿಳಿಯಲು ನೆರವಾಗುವುದು ಗ್ರಾಮ ವಾಸ್ತವ್ಯ. ಶೀಘ್ರವೇ ನನ್ನ ಗ್ರಾಮ ವಾಸ್ತವ್ಯ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭವಾಗಲಿದೆ’ ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

 

ಗ್ರಾಮ ಪಂಚಾಯಿತಿ ಇಲ್ಲವೇ ಹೋಬಳಿ ಮಟ್ಟದಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. ಒಂದು ತಿಂಗಳಿನಲ್ಲಿ ಕನಿಷ್ಠ ಎರಡು ಗ್ರಾಮಗಳಲ್ಲಿ ವಾಸ್ತವ್ಯ ಹೂಡಲು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ. ಮುಖ್ಯಮಂತ್ರಿಗಳ ಕಚೇರಿ ಈ ಕುರಿತು ಅಂತಿಮ ಯೋಜನೆ ತಯಾರು ಮಾಡುತ್ತಿದೆ. ಹೆಚ್ಚು ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ.

ಮಡಿಕೇರಿಯಲ್ಲಿ ಕಳೆದ ವರ್ಷ ಪ್ರವಾಹ ಮಳೆಯಿಂದ ಸಾಕಷ್ಟು ಹಾನಿ ಉಂಟಾಗಿತ್ತು. ನಿರಾಶ್ರಿತರಿಗೆ ಸರ್ಕಾರ ಸಹಾಯ ಒದಗಿಸಿತ್ತು. ಆದರೂ ಕೂಡ ಈ ಭಾಗದಲ್ಲಿ ಸಾಕಷ್ಟು ಕುಂದು ಕೊರತೆಗಳಿವೆ. ಇದನ್ನು ಹತ್ತಿರದಿಂದ ಆಲಿಸಲು ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಹಾಗಾಗಿ ಮಡಿಕೇರಿಯಲ್ಲಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಲು ಚಿಂತನೆ ನಡೆಸಿದ್ದಾರೆ.

2006ರಲ್ಲಿ 20 ತಿಂಗಳುಗಳ ಕಾಲ ಮುಖ್ಯಮಂತ್ರಿಯಾಗಿದ್ದ ಎಚ್‌ಡಿ ಕುಮಾರಸ್ವಾಮಿ, ಗ್ರಾಮ ವಾಸ್ತವ್ಯ ಎಂಬ ಜನಪ್ರಿಯ ಕಾರ್ಯಕ್ರಮ ನೀಡಿದ್ದರು. ಹಳ್ಳಿಗಳ ಜನಸಾಮಾನ್ಯರ ಮನೆಗಳಲ್ಲಿ ತಂಗುತ್ತಿದ್ದರು.. ಈಗ ಮತ್ತೆ ಈ ಕಾರ್ಯಕ್ರಮ ಆರಂಭವಾಗುತ್ತಿದ್ದು ಸಿಎಂ ಕುಮಾರಸ್ವಾಮಿ ನಡೆಯನ್ನು ಸ್ವಾಗತಿಸಿರುವ ನೆಟ್ಟಿಗರು ಉತ್ತರ ಕರ್ನಾಟಕದಿಂದ ಆರಂಭಿಸುವಂತೆ ಮನವಿ ಮಾಡಿದ್ದಾರೆ. 2006ರ ಕುಮಾರಸ್ವಾಮಿ ಆಡಳಿತ ಮರುಕಳಿಸಲಿ ಎಂದು ಕೆಲವು ಪ್ರತಿಕ್ರಿಯಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top