fbpx
ಸಮಾಚಾರ

ರಮ್ಯಾ ಟ್ವಿಟ್ಟರ್ ಖಾತೆ ಡಿಲೀಟ್- ‘ಕೈ’ ಬಿಟ್ಟರೇ ಮಾಜಿ ಸಂಸದೆ.

ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವ ಹೊಂದುವ ಮೂಲಕ ಆನ್‌ಲೈನ್ ವಿಭಾಗವನ್ನು ನಿರ್ವಹಿಸುತ್ತಿರುವವರು ರಮ್ಯಾ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರವಾಗಿಯೇ ಟ್ವೀಟ್ ಮಾಡುತ್ತಲೇ ಪದೇ ಪದೆ ಮೋದಿ ಅಭಿಮಾನಿಗಳನ್ನು ಕೆಣಕುತ್ತಾ ಸುದ್ದಿಯಾಗುತ್ತಿದ್ದ ರಮ್ಯಾರವರ ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಸ್ಥಾನಕ್ಕೆ ಕತ್ತರಿ ಬಿದ್ದಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ಮಾಜಿ ಸಂಸದೆ ರಮ್ಯಾ ಅವರ ತಮ್ಮ ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಂ ಖಾತೆಗಳು ಡಿಲೀಟ್ ಆಗಿವೆ. ಇದ್ದಕ್ಕಿದ್ದಂತೆ ಅವರು ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಹುದ್ದೆ ತ್ಯಜಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.

 

 

ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕವೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದ ರಮ್ಯಾ ಖಾತೆ ದಿಢೀರನೆ ಟ್ವಿಟ್ಟರ್ ಅಂಗಳದಿಂದ ಮಾಯವಾಗಿದೆ. ಲೋಕಸಭಾ ಚುನಾವಣೆಯ ಸೋಲಿನ ನಿರಾಶೆಯಿಂದ ಸಾಮಾಜಿಕ ಜಾಲತಾಣದಿಂದ ದೂರ ಉಳಿದರೇ ಎಂಬ ಮಾತುಗಳು ಕೂಡ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇದೆ ವೇಳೆ ತಾತ್ಕಲಿಕವಾಗಿ ಎಲ್ಲರನ್ನು ಬ್ಲಾಕ್ ಮಾಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ರಮ್ಯಾಅವರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅನಗತ್ಯವಾಗಿ ಟ್ವೀಟ್​ ಮಾಡಿ ಬಹಳಷ್ಟು ಬಾರಿ ಎಡವಟ್ಟು ಮಾಡಿಕೊಂಡಿದ್ದರು. ಇದು ಪಕ್ಷಕ್ಕೆ ಭಾರೀ ಮುಜುಗರಕ್ಕೀಡು ಮಾಡುವಂತೆ ಮಾಡಿತ್ತು.. ಜತೆಗೆ ಅವರು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ಕತ್ತರಿ ಬಿದ್ದಿದೆ ಎಂಬ ಅಭಿಪ್ರಾಯಗಳು ಕೂಡ ವ್ಯಕ್ತವಾಗುತ್ತಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top