fbpx
ಸಮಾಚಾರ

“ಹಿಂದಿ ಕಲಿಯುವ ಅವಶ್ಯಕತೆಯಿಲ್ಲ” ಕನ್ನಡದ ಖಡಕ್ ಐಎಎಸ್ ಅಧಿಕಾರಿ ಕ್ಯಾಪ್ಟನ್ ಮಣಿವಣ್ಣನ್.

ದೇಶಾದ್ಯಂತ ಇತ್ತೀಚಿಗೆ ತಣ್ಣಗಾಗಿದ್ದ ಹಿಂದಿ ಹೇರಿಕೆಯ ಪರ-ವಿರೋಧದ ಚರ್ಚೆ ಇದೀಗ ಮತ್ತೆ ಕಾವು ಪಡೆದುಕೊಂಡಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಹೇರಲು ಮುಂದಾಗಿರುವ ತ್ರಿಭಾಷಾ ನೀತಿ. ಕೇಂದ್ರ ಸರ್ಕಾರದ ಈ ನೀತಿಯ ವಿರುದ್ಧ ಇದೀಗ ಕರ್ನಾಟಕ ಮಾತ್ರವಲ್ಲ ಇಡೀ ದಕ್ಷಿಣ ಭಾರತ ಸಿಡಿದೆದ್ದು ನಿಂತಿದ್ದು ರಾಜ್ಯ ನಾಯಕರು ಟೀಕಾಪ್ರಹಾರ ನಡೆಸಿದ್ದಾರೆ. ಏಕೀ ಅನಗತ್ಯ ಹಿಂದಿ ಹೇರಿಕೆ? ಭಾರತವೆಂದರೆ ಕೇವಲ ಹಿಂದಿಭಾಷಿಕರ ದೇಶವೇ? ವಾದಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿದೆ.

ಇದೀಗ ಕನ್ನಡದ ಖಡಕ್ ಐಎಎಸ್ ಅಧಿಕಾರಿ ಕ್ಯಾಪ್ಟನ್ ಮಣಿವಣ್ಣನ್ ಅವರು ಕೂಡ ಹಿಂದಿ ಹೇರಿಕೆ ವಿರುದ್ಧ ಧ್ವನಿಯೆತ್ತಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಿಂದಿ ಭಾಷೆಯಲ್ಲಿನ ಪೋಸ್ಟ್ ವೊಂದಕ್ಕೆ ಪ್ರತಿಕ್ರಿಯಿಸಿರುವ ಅವರು ಹಿಂದಿ ಹೇರಿಕೆ ಸರಿಯಲ್ಲ ಎಂದು ಹೇಳಿದ್ದಾರೆ.

“ನಾನೊಬ್ಬ ಹೆಮ್ಮೆಯ ಭಾರತೀಯ, ಐಎಎಸ್ ಅಧಿಕಾರಿ ಹಾಗೆಯೇ ಭಾರತೀಯ ಸೇನೆಯ ನಿಯೋಜಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಆದರೆ, ನನಗೆ ಹಿಂದಿ ಓದಲು ಬರುವುದಿಲ್ಲ. ನಾನು ಹಿಂದಿ ಕಲಿಯುವ ಅಗತ್ಯವಿಲ್ಲ ಮತ್ತು ನಾನು ಕಲಿಯಲು ಯೋಚಿಸುವುದಿಲ್ಲ.” ಎಂದು ಹೇಳುವ ಮೂಲಕ ಹಿಂದಿ ಹೇರಿಕೆ ವಿರುದ್ಧ ಧ್ವನಿಯೆತ್ತಿದ್ದಾರೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top