fbpx
ಸಮಾಚಾರ

#PailwaanBoxingPoster- ಐದು ಭಾಷೆಗಳಲ್ಲಿ ಬಿಡುಗಡೆಯಾಯ್ತು ‘ಪೈಲ್ವಾನ್’ ಪೋಸ್ಟರ್.

ಕಿಚ್ಚ ಸುದೀಪ್ ಅವರ ಬಹುನಿರೀಕ್ಷಿತ ಪೈಲ್ವಾನ್ ಚಿತ್ರದ ಮೇಲಿನ ಕುತೂಹಲ ದಿನೇ ದಿನೇ ಹೆಚ್ಚುತ್ತಲೇ ಇದೆ. ಕನ್ನಡವೂ ಸೇರಿ ಒಟ್ಟು 5 ಭಾಷೆಗಳಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಬಗ್ಗೆ ಸ್ವತಃ ಕಿಚ್ಚನ ಅಭಿಮಾನಿಗಳು ತಲೆಕೆಡಿಸಿಕೊಂಡು ಕೂತಿದ್ದರೇ ಮಾಮೂಲಿ ಪ್ರೇಕ್ಷಕರಲ್ಲೂ ವಿಭಿನ್ನ ಕ್ರೇಜ್ ಹುಟ್ಟುಹಾಕುತ್ತಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿರುವ ಚಿತ್ರದ ಮೇಕಿಂಗ್ ಸ್ಟಿಲ್ಲುಗಳೇ ಪ್ರೇಕ್ಷಕರನ್ನು ರೋಮಾಂಚನಗೊಳಿಸುತ್ತಿದೆ.

ಈ ಸಿನಿಮಾದಲ್ಲಿ ಕಿಚ್ಚ ಸುದೀಪ್ ಅವರ ಬಾಕ್ಸಿಂಗ್ ಲುಕ್ ಹೇಗಿದೆ ಎನ್ನುವ ಅಭಿಮಾನಿಗಳ ಕುತೂಹಲ ತಣಿಸಲು ಇಂದು ಪೋಸ್ಟರ್ ಬಿಡುಗಡೆಯಾಗಿದೆ. houdu, ಇಂದು ಎಲ್ಲಾ 5 ಭಾಷೆಗಳಲ್ಲಿ ಪೈಲ್ವಾನ್ ಚಿತ್ರದ ಹೊಸ ಬಾಕ್ಸಿಂಗ್ ಲುಕ್‍ನಲ್ಲಿ ಸುದೀಪ್ ಮಿಂಚುತ್ತಿರುವ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಮಲೆಯಾಳಂ ನಟ ಮೋಹನ್‍ಲಾಲ್, ಬಾಲಿವುಡ್ ನಟ ಸುನೀಲ್ ಶೆಟ್ಟಿ, ತಮಿಳು ನಟ ವಿಜಯ್ ಸೇತುಪತಿ, ತೆಲಗು ನಟ ಚಿರಂಜೀವಿ ಹಾಗೂ ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ.

 

 

 

 

 

 

ಪೈಲ್ವಾನ್ ಬಗ್ಗೆ:
ಪೈಲ್ವಾನ್ ಚಿತ್ರದ ಬಗ್ಗೆ ಹೇಳಬೇಕೆಂದರೆ ಮುಂಬೈ ಬೆಡಗಿ ಆಕಾಂಕ್ಷ ಸಿಂಗ್ ಸುದೀಪ್’ಗೆ ನಾಯಕಿಯಾಗಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಬಾಲಿವುಡ್ ನಟ ಸುನಿಲ್ ಶೆಟ್ಟಿ, ಕರುಣ್ ದುಹಾನ್ ಸಿಂಗ್, ಸುಶಾಂತ್ ಸಿಂಗ್, ಅವಿನಾಶ್ ಸೇರಿದಂತೆ ಹಲವಾರು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. RRR ಮೋಶನ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ತಯಾರಾಗುತ್ತಿರುವ ಪೈಲ್ವಾನ್ ಚಿತ್ರವನ್ನು ನಿರ್ದೇಶಕ ಕೃಷ್ಣಾ ಅವರ ಪತ್ನಿ ಸ್ವಪ್ನ ಕೃಷ್ಣಾ ನಿರ್ಮಾಣ ಮಾಡುತ್ತಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮತ್ತು ಕರುಣಾಕರ್ ಅವರ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top