fbpx
ಸಮಾಚಾರ

“ಕೇಂದ್ರ ಸರ್ಕಾರದ ಉದ್ಯೋಗಗಳಲ್ಲಿ ಹಿಂದೀಯೇತರರಿಗೂ ಸಮಾನ ಅವಕಾಶ ಕೊಡಿ” ಸಂಸದ ಜಿಸಿಸಿ.

ಕೇಂದ್ರ ಸರ್ಕಾರೀದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಹಿಂದಿ ಭಾಷಿಗರಿಗೆ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತಿದೆ. ಕೇಂದ್ರದ ಉದ್ಯೋಗಗಳಲ್ಲಿ ಹಿಂದಿ ಭಾಷಿಗರಂತೆ ಹಿಂದಿಯೇತರ ಭಾಷಿಗರಿಗೂ ಸಮಾನ ಅವಕಾಶ ನೀಡಬೇಕು ಎಂದು ಸಂಸದ ಜಿಸಿ ಚಂದ್ರಶೇಖರ್ ಆಗ್ರಹಿಸಿದ್ದಾರೆ.

ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಜಿಸಿಸಿ “ಎಲ್ಲಾ ಭಾರತೀಯರಿಗೆ ಸಮಾನ ಉದ್ಯೋಗದ ಅವಕಾಶವನ್ನು ಒದಗಿಸುವ ಕೇಂದ್ರ ಸರ್ಕಾರವು ಜವಾಬ್ದಾರಿಯಾಗಿರುತ್ತದೆ. ಆದರೆ ಪ್ರಸ್ತುತ ಭಾಷಾ ನೀತಿಯು ಹಿಂದಿಯೇತರ ಭಾಷಿಕರಿಗೆ ನಿರೀಕ್ಷಿತ ಪ್ರಮಾಣದಲ್ಲಿ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ನಾನು ಕೇಂದ್ರದ ಈ ನೀತಿಯನ್ನು ವಿರೋಧಿಸುತ್ತೇನೆ, ಕೇಂದ್ರ ಸರ್ಕಾರದ ಉದ್ಯೋಗಗಳಲ್ಲಿ ಹಿಂದೀಯೇತರರಿಗೂ ಸಮಾನ ಅವಕಾಶ ಕೊಡಬೇಕು ಎಂದು ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top