fbpx
ಸಮಾಚಾರ

ವಿಶ್ವಸಂಸ್ಥೆಯಲ್ಲಿ ಕನ್ನಡ ಭಾಷಣ ಮಾಡಿದ ಪ್ರಥಮ ವ್ಯಕ್ತಿ ಅನಂತಕುಮಾರ್.

ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿ ಪ್ರಥಮ ಕನ್ನಡಿಗ ಎಂಬ ಹೆಗ್ಗಳಿಕೆ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರದ್ದು. ವಿಶ್ವಸಂಸ್ಥೆಯಲ್ಲಿ ನಿಂತು ಕನ್ನಡ ಮಾತನಾಡಿದ್ದು ಕನ್ನಡಿಗನಾಗಿ ಅನಂತ್ ಕುಮಾರ್ ಅವರ ದೊಡ್ಡ ಸಾಧನೆ ಎನ್ನಬಹುದು.

ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ಅವಕಾಶ ಸಿಗುವುದೇ ಅಪರೂಪ. ಹೀಗಿರುವಾಗ ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ ಅವರು ವಿಶ್ವಸಂಸ್ಥೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕನ್ನಡದಲ್ಲಿ ಮಾತನಾಡುವ ಮೂಲಕ ಇತಿಹಾಸ ನಿರ್ಮಿಸಿದ್ದರು. 2015ರ ಅಕ್ಟೋಬರ್​ 15ರಂದು ವಿಶ್ವಸಂಸ್ಥೆಯ 67ನೇ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಅನಂತಕುಮಾರ್ ಕನ್ನಡದಲ್ಲಿ ತಮ್ಮ ಭಾಷಣ ಆರಂಭಿಸಿ ಗಮನಸೆಳೆದಿದ್ದರು.

‘ಸನ್ಮಾನ್ಯ ಅಧ್ಯಕ್ಷರೇ ಮತ್ತು ವಿಶ್ವದ ನನ್ನ ಪ್ರೀತಿಯ ಸಹೋದರ, ಸಹೋದರಿಯರೇ ನಿಮ್ಮೆಲ್ಲರಿಗೂ ನನ್ನ ಮುಂಜಾನೆಯ ಶುಭಾಶಯಗಳ’ ಎಂದು ಅನಂತ್​​​ಕುಮಾರ್​​ ಭಾಷಣ ಆರಂಭಿಸಿದ್ದರು. ಅಂದು ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಅನಂತ್​ ಕುಮಾರ್​, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕನ್ನಡದಲ್ಲಿ ಭಾಷಣ ಆರಂಭಿಸಿ ಮೆಚ್ಚುಗೆಗೆ ಪಾತ್ರವಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top