fbpx
ಸಮಾಚಾರ

“ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳದಿದ್ದರೆ ಕಾಂಗ್ರೆಸ್ 10 ಸೀಟು ಗೆಲ್ಲಬಹುದಿತ್ತು” ಸುಮಲತಾ ಅಂಬರೀಷ್.

ರಾಜ್ಯದಲ್ಲಿ ಜಾತ್ಯಾತೀತ ಜನತಾದಳದೊಡನೆ ಮೈತ್ರಿ ಮಾಡಿಕೊಂಡದ್ದೇ ಕಾಂಗ್ರೆಸ್ ಸೋಲಿಗೆ ಕಾರಣ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.ಎಕನಾಮಿಕ್ಸ್ ಟೈಮ್ಸ್‌ಗೆ ವಿಶೇಷ ಸಂದರ್ಶನ ನೀಡಿರುವ ಸುಮಲತಾ, ಇದೇ ಮೊದಲ ಬಾರಿಗೆ ರಾಜ್ಯ ರಾಜಕಾರಣದ ಕುರಿತು ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ.

“ರಾಜ್ಯದಲ್ಲಿ ಕಾಂಗ್ರೆಸ್ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಲೋಕಸಭೆ ಚುನಾವಣೆ ಎದುರಿಸಿದ್ದರೆ ಕನಿಷ್ಟ ಹತ್ತು ಸ್ಥಾನಗಳನ್ನು ಗಳಿಸುತ್ತಿತ್ತು. ಜನರು ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಒಪ್ಪಿಕೊಂಡಿಲ್ಲ, ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ತಾನು ಗೆಲ್ಲಬಹುದಾಗಿದ್ದ ಸ್ಥಾನವನ್ನೂ ಬಿಟ್ಟುಕೊಟ್ಟಿತು. ” ಎಂದು ಸುಮಲತಾ ಅಭಿಪ್ರಾಯಪಟ್ಟರು.

ನಾನು ಕಾಂಗ್ರೆಸ್ ನಾಯಕರಿಗೆ ಮನವರಿಕೆ ಮಾಡಲು ಯತ್ನಿಸಿದ್ದೆ. ಒಂದು ವೇಳೆ ಏಕಾಂಗಿಯಾಗಿ ಸ್ಪರ್ಧೆ ಮಾಡದಿದ್ದರೆ ನಿಮಗೆ ನಷ್ಟ ಎಂದು ಹೇಳಿದ್ದೆ. ಆದರೆ ಕಾಂಗ್ರೆಸ್ ಗೆಲ್ಲಬಹುದಾದ ಸೀಟನ್ನು ಕೂಡ ಬಿಟ್ಟುಕೊಟ್ಟಿತ್ತು. ಕಾಂಗ್ರೆಸ್ ನಲ್ಲಿ ಒಳ್ಳೆಯ ಅಭ್ಯರ್ಥಿಗಳಿದ್ದರೂ ಸೀಟು ಬಿಟ್ಟುಕೊಟ್ಟಿದ್ದರಿಂದ ಬಿಜೆಪಿಗೆ ಲಾಭ ಆಯ್ತು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top