fbpx
ಸಮಾಚಾರ

ಸರ್ಕಾರದಿಂದ ಆಯೋಜನೆಗೊಂಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮೊಬೈಲ್‍ನಲ್ಲೇ ಬ್ಯುಸಿಯಾದ ತೇಜಸ್ವಿ.

ಬೆಂಗಳೂರು ದಕ್ಷಿಣ ಕ್ಷೇತ್ರದ ನೂತನ ಸಂಸದ ಸರ್ಕಾರೀ ಕಾರ್ಯಕ್ರಮದಲ್ಲಿ ಮೊಬೈಲ್ ನಲ್ಲೇ ಮುಳುಗಿ ಸುದ್ದಿಯಾಗಿದ್ದಾರೆ. ಹೌದು, ರಾಜ್ಯ ಸರ್ಕಾರದ ಅರಣ್ಯ ಇಲಾಖೆ ವತಿಯಿಂದ ಆಯೋಜನೆಗೊಂಡಿದ್ದ ಪರಿಸರ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ ಮೊಬೈಲಿನಲ್ಲಿ ಮುಳುಗಿದ್ದು ಚರ್ಚೆಗೆ ಗ್ರಾಸವಾಗಿದೆ.

ಮಲ್ಲೇಶ್ವರಂನಲ್ಲಿನ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಆಯೋಜನೆಗೊಂಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವೇದಿಕೆ ಮೇಲೆ ಇದ್ದರೂ ಮೊಬೈಲ್ ಚಾಟಿಂಗ್ ನಲ್ಲಿ ಬ್ಯುಸಿಯಾಗಿದ್ದರು.

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕಾರಿಸಿದ ನಂತರ ವೇದಿಕೆ ಮೇಲೆ ಬಂದು ಕುಳಿತ ತೇಜಸ್ವಿ ಸೂರ್ಯ ಕಾರ್ಯಕ್ರಮದುದ್ದಕೂ ಮೊಬೈಲ್‍ನಲ್ಲಿ ಚಾಟ್ ಮಾಡುತ್ತಾ ಕುಳಿತ್ತಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಭಾಷಣ ಮಾಡುತ್ತಿದ್ದರೂ ತೇಜಸ್ವಿ ಸೂರ್ಯ ಮಾತ್ರ ಮೊಬೈಲ್ ನೋಡುತ್ತಾ ಮಗ್ನರಾಗಿದ್ದರು.

ಅಂದಹಾಗೆ ಈ ಕಾರ್ಯಕ್ರಮಕ್ಕೆ BBMP ಉಪ ಸಭಾಪತಿ ಧರ್ಮೇಗೌಡ, ಶಾಸಕ ಅಶ್ವಥ್ ನಾರಾಯಣ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top