fbpx
ಸಮಾಚಾರ

“ಇನ್ನು ನಾಲ್ಕು ವರ್ಷ ಯಾವುದೇ ಚುನಾವಣೆ ಇಲ್ಲ” ಬಿಎಸ್ ಯಡಿಯೂರಪ್ಪ ತಿರುಗೇಟು.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲ್ಲ. ಹೀಗಾಗಿ ಮತ್ತೆ ಚುನಾವಣೆಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಯಾವಾಗ ಬೇಕಾದರೂ ಚುನಾವಣೆ ನಡೆಯಬಹುದು ಸಿದ್ದರಾಗಿರಿ ಎಂಬ ನಿಖಿಲ್​ ಕುಮಾರಸ್ವಾಮಿ ಹೇಳಿಕೆಗೆ ಟಾಂಗ್​ ನೀಡಿರುವ ಮಾಜಿ ಸಿಎಂ ಬಿಎಸ್​ಯಡಿಯೂರಪ್ಪ ಯಾವುದೇ ಕಾರಣಕ್ಕೂ ಇನ್ನು ನಾಲ್ಕು ವರ್ಷದೊಳಗೆ ಮತ್ತೊಂದು ಚುನಾವಣೆ ನಡೆಯುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ಮಗ ನಿಖಿಲ್ ಯಾವ ಸಂದರ್ಭದಲ್ಲಾದರೂ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ ಯಾವುದೇ ಕಾರಣಕ್ಕೂ ಚುನಾವಣೆ ನಡೆಯುವುದಿಲ್ಲ. ಅಧಿಕಾರ ನಡೆಸಲು ಆದರೆ ನಡೆಸಲಿ, ಆಗದಿದ್ದರೆ ಬಿಟ್ಟು ಹೋಗಲಿ. ಈ ಸರ್ಕಾರ ಬಹಳ ದಿನ ಇರುತ್ತದೆ ಎಂದು ಯಾರಿಗೂ ವಿಶ್ವಾಸವಿಲ್ಲ. ಜನರ ಬಳಿ ಹೋಗಲು ಇನ್ನೂ ಐದು ವರ್ಷ ಬಾಕಿಯಿದೆ ಎಂದು ಹೇಳಿದರು.

ಎರಡು ದಿನದ ಹಿಂದೆ ಮಂಡ್ಯದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದ್ದ ನಿಖಿಲ್​ ಕುಮಾರಸ್ವಾಮಿ, ಯಾವ ಸಂದರ್ಭದಲ್ಲಿ ಆದರೂ ಚುನಾವಣೆ ಎದುರಾಗಬಹುದು ಸಿದ್ದರಾಗಿರಿ ಎಂದು ಕಿವಿಮಾತು ಹೇಳಿದ ವಿಡಿಯೋ ವೈರಲ್​ ಆಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top