fbpx
ಸಮಾಚಾರ

“ಕಾಂಗ್ರೆಸ್ ದಾಖಲೆ ಧೂಳಿಪಟ ಮಾಡಿ ಬಿಜೆಪಿ 2047ರವರೆಗೂ ಅಧಿಕಾರದಲ್ಲಿರಲಿದೆ”

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಭೂತಪೂರ್ವ ಜನಮನ್ನಣೆ ಗಳಿಸಿದ್ದು, 2047ರವರೆಗೂ ಬಿಜೆಪಿಯೇ ಅಧಿಕಾರದಲ್ಲಿರಲಿದೆ ಎಂದು ಬಿಜೆಪಿ ಮುಖಂಡ ರಾಮ್ ಮಾಧವ್ ಹೇಳಿದ್ದಾರೆ.

 

 

ಅಗರ್ತಲಾದಲ್ಲಿ ಶುಕ್ರವಾರ ನಡೆದ ಬಿಜೆಪಿ ವಿಜಯಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಷ್ಟ್ರೀಯತೆ ಎಂಬುದು ಬಿಜೆಪಿಯ ಡಿಎನ್ಎ ಅಲ್ಲಿಯೇ ಇದೆ. ಅದೇ ಬಿಜೆಪಿ ಪಕ್ಷದ ಹೆಗ್ಗುರುತು. ಹಾಗಾಗಿಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ಜನ ಭರವಸೆ ಇರಿಸಿದ್ದಾರೆ. ಇದೇ ಕಾರಣಕ್ಕೆ ಸತತ 2ನೇ ಬಾರಿಗೂ ಭರ್ಜರಿ ಗೆಲುವು ನೀಡಿದ್ದಾರೆ. ಮೋದಿ ಸರ್ಕಾರ ದೇಶದಲ್ಲಿನ ಕೋಮು ಸಂಘರ್ಷ, ಭ್ರಷ್ಟಾಚಾರ ನಿಯಂತ್ರಿಸಿದ್ದು, ಬಲಿಷ್ಠ ಭಾರತದ ನಿರ್ಮಾಣ ಮಾಡುತ್ತಿದೆ. ವಿತ್ತೀಯ ಸ್ಥಿರತೆ ಸಾಧಿಸಿದೆ ಎಂದು ಮಾಧವ್ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ನೇತೃತ್ವದಲ್ಲೇ ಭಾರತದ 100ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಲಿದ್ದೇವೆ. 1950 ರಿಂದ 1977 ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈ ದಾಖಲೆಯನ್ನು ಬಿಜೆಪಿ ಮುರಿಯಲಿದ್ದು, 2047ರಲ್ಲಿ ಬಿಜೆಪಿ ಸರ್ಕಾರವೇ ಸ್ವಾತಂತ್ರ್ಯ ದಿನಾಚರಣೆಯ ಶತಮಾನೋತ್ಸವ ಆಚರಣೆ ಮಾಡಲಿದೆ ಎಂದು ರಾಮ್ ಮಾಧವ್ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top