fbpx
ಸಮಾಚಾರ

ಕೊನೆಗೂ ಮೈತ್ರಿ ಸಂಪುಟ ವಿಸ್ತರಣೆಗೆ ಡೇಟ್‌ ಫಿಕ್ಸ್‌- ಯಾರಿಗೆ ಸಚಿವ ಸ್ಥಾನ?

ಲೋಕಸಭೆ ಚುನಾವಣೆಯಲ್ಲಿ ಹಿನಾಯ ಸೋಲಿನ ಬಳಿಕ ಸಮ್ಮಿಶ್ರ ಸರಕಾರ ಉಳಿಸಿಕೊಳ್ಳಲು ಸಂಪುಟ ವಿಸ್ತರಣೆ ಮಾಡಲು ಮೈತ್ರಿ ಪಕ್ಷಗಳು ನಿರ್ಧರಿಸಿವೆ. ಹಲವರ ಅಸಮಾಧಾನಗಳ ನಡುವೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಕೊನೆಗೂ ಸಂಪುಟ ವಿಸ್ತರಣೆ ನಡೆಸಲು ದಿನಾಂಕ ನಿಗದಿ ಮಾಡಿದೆ. ಜೂನ್‌ 12 ರ ಬುಧವಾರ ಬೆಳಗ್ಗೆ 11.30 ಕ್ಕೆ ಮೂವರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಂಪುಟ ಸೇರ್ಪಡೆಯಾಗಲಿದ್ದಾರೆ.

 

 

ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದೆ. ಅವರು ಪ್ರಮಾಣ ವಚನ ಬೋಧನೆಗೆ ಬುಧವಾರ ಜೂನ್ 12ರಂದು ಬೆಳಿಗ್ಗೆ 11.30 ಕ್ಕೆ ಸಮಯ ನಿಗದಿ ಪಡಿಸಿದ್ದಾರೆ’ ಎಂದು ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ರಾಣೆಬೆನ್ನೂರು ಶಾಸಕ ಆರ್ ಶಂಕರ್ ಹಾಗೂ ಮುಳಬಾಗಿಲು ಶಾಸಕ ನಾಗೇಶ್ ಇವರಿಬ್ಬರೂ ಪಕ್ಷೇತರ ಶಾಸಕರಾಗಿದ್ದಾರೆ. ದೋಸ್ತಿ ಸರ್ಕಾರ ಉಳಿಸಿಕೊಳ್ಳುವ ಯತ್ನ ನಡೆಸಲಾಗುತ್ತಿದ್ದು, ಹೀಗಾಗಿ ಪಕ್ಷೇತರರನ್ನ ಹಿಡಿದಿಟ್ಟುಕೊಳ್ಳಲು ಪ್ಲಾನ್ ರೂಪಿಸಲಾಗಿದೆ ಎನ್ನಲಾಗಿದೆ.

ಕುಂದಗೋಳ ಶಾಸಕ ಶಿವಳ್ಳಿ ನಿಧನದಿಂದ ತೆರವಾಗಿರುವ ಹಿನ್ನೆಲೆಯಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಗಳಿದೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಹೇಳಿದ್ದರು. ಆದರೆ ರಾಮಲಿಂಗಾ ರೆಡ್ಡಿ ಅವರಿಗೆ ಮಂತ್ರಿ ಸ್ಥಾನ ಸಿಗುವುದು ಅನುಮಾನ ಎನ್ನಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top