fbpx
ಸಮಾಚಾರ

ಪರಸ್ಪರ ಚರ್ಚೆ ಮೂಲಕ ಎಲ್ಲಾ ಸಮಸ್ಯೆ ಪರಿಹರಿಸಿಕೊಳ್ಳೋಣ: ಪ್ರಧಾನಿ ಮೋದಿಗೆ ಇಮ್ರಾನ್ ಖಾನ್ ಪತ್ರ

ಹಲವು ದಿನಗಳಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಎದ್ದಿರುವ ವೈಮನಸ್ಯಕ್ಕೆ ತೆರೆ ಎಳೆಯಲು ಪಾಕ ಪ್ರಧಾನಿ ಇಮ್ರಾನ್ ಖಾನ್ ಮುಂದಾಗಿದ್ದು, ಈ ಸಂಬಮಧ ಭಾರತಕ್ಕೆ ಪತ್ರ ಬರೆದಿದ್ದಾರೆ. ಕಶ್ಮೀರ ಸಮಸ್ಯೆ ಒಳಗೊಂಡಂತೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಎಲ್ಲಾ ವಿವಾದಗಳನ್ನೂ ಮಾತುಕತೆಯ ಮೂಲಕ ಪರಿಹರಿಸೋಣ ಎಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.

‘ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮೂಡುವಂತೆ ಮಾಡಲು ಪಾಕ್​ ಬದ್ಧವಾಗಿದೆ. ಆದ್ದರಿಂದ ಈ ವಿಷಯವಾಗಿ ಉಭಯ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಪ್ರಾದೇಶಿಕ ಶಾಂತಿ ಕಾಯ್ದುಕೊಳ್ಳಲು ಬದ್ಧತೆಯೊಂದಿಗೆ, ಇಸ್ಲಾಮಾಬಾದ್‌ ಮತ್ತು ದೆಹಲಿ ನಡುವಿನ ಎಲ್ಲ ಮಹತ್ವದ ವಿಷಯಗಳ ಕುರಿತು ಮಾತುಕತೆಗೆ ಮುಂದಾಗೋಣ ಎಂದು ಪತ್ರದಲ್ಲಿ ಕೋರಿದ್ದಾರೆ.

ಪಾಕಿಸ್ತಾನ ಪ್ರಧಾನಿ ಇಮ್ರಾನ್‌ಖಾನ್‌ ಕೂಡ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಿ ಪ್ರಾದೇಶಿಕ ಶಾಂತಿ ಮತ್ತು ಸಮೃದ್ಧಿಗೆ ಜತೆಯಾಗಿ ಹೋಗೋಣ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಮೋದಿ, ಹಿಂಸೆ ರಹಿತ ವಾತಾವರಣ ಸೃಷ್ಟಿ, ಪರಸ್ಪರ ವಿಶ್ವಾಸ ಹಾಗೂ ಭಯೋತ್ಪಾದನೆ ನಿರ್ಮೂಲನೆಯಿಂದ ಮಾತ್ರ ಪ್ರಾದೇಶಿಕ ಶಾಂತಿ ಸಾಧ್ಯ ಎಂದು ಸ್ಪಷ್ಟಪಡಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top