fbpx
ಸಮಾಚಾರ

“ಯಾವುದೇ ವಿಧಿವಿಧಾನ ಇರಲ್ಲ, ಅಂತಿಮ ದರ್ಶನಕ್ಕೆ ಸಾರ್ವಜನಿಕರು, ಗಣ್ಯರು ಬರಬೇಡಿ” ಕಾರ್ನಾಡ್ ಕುಟುಂಬಸ್ಥರ ಮನವಿ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ ಗಿರೀಶ್‌ ಕಾರ್ನಾಡ್‌ ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವಿಲ್ಲೆ ರಸ್ತೆಯ ನಿವಾಸದಲ್ಲಿ ಸೋಮವಾರ 81 ವರ್ಷದ ಗಿರೀಶ್‌ ಕಾರ್ನಾಡ್‌ ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಲ್ಯಾವೆಲ್ಲಿ ರೋಡ್​ ನಲ್ಲಿರುವ ನಿವಾಸದಲ್ಲಿ ಕಾರ್ನಾಡ್​ ಕೊನೆ ಉಸಿರೆಳೆದಿದ್ದಾರೆ.

ಗಿರೀಶ್​ ಕಾರ್ನಾಡ್​ ಅವರ ಅಂತ್ಯಕ್ರಿಯೆ ಬೈಯಪ್ಪನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡುವುದಿಲ್ಲ ಎಂದು ಕುಟುಂಬದ ಆಪ್ತರು ಖಚಿತಪಿಡಿಸಿದ್ದಾರೆ. ಮಧ್ಯಾಹ್ನದ ಮೇಲೆ ಬೈಯಪ್ಪನಹಳ್ಳಿಯಲ್ಲಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಸಚಿವರು, ಗಣ್ಯರು ಯಾರು ಬರುವುದು ಬೇಡ. ಸಾರ್ವಜನಿಕ ದರ್ಶನ ಇರುವುದಿಲ್ಲ. ಯಾವುದೇ ವಿಧಿ ವಿಧಾನ ಇರುವುದಿಲ್ಲ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸುತ್ತಿದ್ದೇವೆ. ಸಮಯವನ್ನು ಶೀಘ್ರದಲ್ಲೇ ನಿಗದಿ ಮಾಡಿ ತಿಳಿಸುತ್ತೇವೆ” ಎಂದು ನಿರ್ದೇಶಕ ಕುಟುಂಬಸ್ಥರು ತಿಳಿಸಿದ್ದಾರೆ.

ಗಿರೀಶ್ ಕಾರ್ನಾಡ್ ಕುಟುಂಬ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದು, ಅವರ ಅಂತಿಮ ದರ್ಶನಕ್ಕೆ ಮನೆಗೆ ಬರಬೇಡಿ ಎಂದು ಕುಟುಂಬಸ್ಥರು ಹೇಳಿದ್ದು ಮನೆಯ ಬಳಿ ಸಾಕಷ್ಟು ಜನರು ನೆರೆದರೆ ತೊಂದರೆ ಆಗುತ್ತದೆ. ಹೀಗಾಗಬಾರದು ಎನ್ನುವ ಬೇಡಿಕೆ ಅವರದ್ದು. ಈ ಮನವಿ ಕೇವಲ ಜನಸಾಮಾನ್ಯರಿಗೆ ಅಲ್ಲ, ರಾಜಕಾರಣಗಳು ಮತ್ತು ಅಧಿಕಾರಿಗಳಿಗೂ ಅನ್ವಯಿಸುತ್ತದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top