fbpx
ಸಮಾಚಾರ

ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ ಗಿರೀಶ್‌ ಕಾರ್ನಾಡ್‌ ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವಿಲ್ಲೆ ರಸ್ತೆಯ ನಿವಾಸದಲ್ಲಿ ಸೋಮವಾರ 81 ವರ್ಷದ ಗಿರೀಶ್‌ ಕಾರ್ನಾಡ್‌ ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಲ್ಯಾವೆಲ್ಲಿ ರೋಡ್​ ನಲ್ಲಿರುವ ನಿವಾಸದಲ್ಲಿ ಕಾರ್ನಾಡ್​ ಕೊನೆ ಉಸಿರೆಳೆದಿದ್ದಾರೆ. ಸಾಹಿತ್ಯ ಲೋಕಕ್ಕೆ ಅವರು ನೀಡಿದ ಕೊಡುಗೆ ಆಧರಿಸಿ ಪದ್ಮ ಶ್ರೀ, ಪದ್ಮಭೂಷಣ, ಜ್ಞಾನಪೀಠ ಪ್ರಶಸ್ತಿ​ ಸೇರಿ ಅನೇಕ ಪ್ರಶಸ್ತಿಗಳು ಲಭ್ಯವಾಗಿದ್ದವವು. ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಅಪಾರ.

1938 ಮೇ 19ರಂದು ಗಿರೀಶ್ ಕಾರ್ನಾಡ್ ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಗಿರೀಶ್ ಕಾರ್ನಾಡ್, ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಪ್ರೌಢ ಶಿಕ್ಷಣ ಪೂರೈಸಿದ್ದರು. ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿರುವ ಕಾರ್ನಾಡ್, ಆಕ್ಸ್ಫರ್ಡ್ ಡಿಬೇಟ್ ಕ್ಲಬ್ ಅಧ್ಯಕ್ಷರಾದ ಪ್ರಥಮ ಏಷಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಕನ್ನಡ, ಹಿಂದಿ, ಪಂಜಾಬಿ, ಮರಾಠಿ ಭಾಷೆಗಳಲ್ಲಿ ಪರಿಣಿತಿ ಹೊಂದಿದ್ದ ಕಾರ್ನಾಡ್ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯ ಪಸರಿಸಿದ್ದರು. ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ನಾಟಕಕಾರ, ಚಿತ್ರ ನಿರ್ದೇಶಕ, ನಟ ಹಾಗೂ ಕವಿಯಾಗಿಯೂ ಖ್ಯಾತಿ ಪಡೆದಿದ್ದಾರೆ. ಇವರ ತುಘಲಕ್ ಮತ್ತು ತಲೆದಂಡ ನವ್ಯಸಾಹಿತ್ಯ ಚಳವಳಿಯ ಅತ್ಯುತ್ತಮ ನಾಟಕಗಳು ತಬ್ಬಲಿಯು ನೀನಾದೆ ಮಗನೆ, ಒಂದಾನೊಂದು ಕಾಲದಲ್ಲಿ, ಕಾಡು, ಸಂಸ್ಕಾರ, ವಂಶವೃಕ್ಷ ಮೊದಲಾದ ಕೆಲ ಕನ್ನಡ ಚಿತ್ರಗಳು ನಿರ್ದೇಶನ ಮಾಡಿದ್ದಾರೆ. ಕಾರ್ನಾಡರಿಗೆ ಪದ್ಮಶ್ರೀ, ಪದ್ಮಭೂಷಣ ಹಾಗೂ 1998 ರಲ್ಲಿ ಜ್ಞಾನಪೀಠ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಮೂಲಕ ಕ್ನನಡಕ್ಕೆ 6ನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹೆಗ್ಗಳಿಕೆ ಇವರದ್ದಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top