fbpx
ಸಮಾಚಾರ

ಗಿರೀಶ್ ಕಾರ್ನಾಡ್ ನಿಧನ- ಸರ್ಕಾರೀ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ, ಮೂರು ದಿನ ಶೋಕಾಚರಣೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ ಗಿರೀಶ್‌ ಕಾರ್ನಾಡ್‌ ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವಿಲ್ಲೆ ರಸ್ತೆಯ ನಿವಾಸದಲ್ಲಿ ಸೋಮವಾರ 81 ವರ್ಷದ ಗಿರೀಶ್‌ ಕಾರ್ನಾಡ್‌ ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಲ್ಯಾವೆಲ್ಲಿ ರೋಡ್​ ನಲ್ಲಿರುವ ನಿವಾಸದಲ್ಲಿ ಕಾರ್ನಾಡ್​ ಕೊನೆ ಉಸಿರೆಳೆದಿದ್ದಾರೆ.

 

ಗಿರೀಶ್ ಕಾರ್ನ್ಡ್ ಅವರ ನಿಧನದ ನಿಮಿತ್ತ ಅವರಿಗೆ ಗೌರವ ಸೂಚಕವಾಗಿ ರಾಜ್ಯ ಸರ್ಕಾರ ಶಾಲಾ ಕಾಲೇಜು ಮತ್ತು ಸರ್ಕಾರೀ ಕಚೇರಿಗಳಿಗೆ ಒಂದು ದಿನ ರಜೆ ಘೋಷಿಸಲಾಗಿದ್ದು ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಆಚರಿಸಲಾಗುತ್ತದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಅವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಘೋಷಿಸಲಾಗಿದೆ.

“ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ #GirishKarnad ಗೌರವಾರ್ಥ ಸರ್ಕಾರಿ ಕಚೇರಿಗಳು,ಶಾಲೆ,ಕಾಲೇಜುಗಳಿಗೆ ಇಂದು ಒಂದು ದಿನ ರಜೆ ಘೋಷಿಸಲಾಗುವುದು.ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗುವುದು ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ” ಎಂದು ಮುಖ್ಯಮಂತ್ರಿಯವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೇಳಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top