fbpx
ಸಮಾಚಾರ

ಗಿರೀಶ್ ಕಾರ್ನಾಡ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೊವಿಂದ್ ಸೇರಿದಂತೆ ಗಣ್ಯಾತಿಗಣ್ಯರ ಸಂತಾಪ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ ಗಿರೀಶ್‌ ಕಾರ್ನಾಡ್‌ ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವಿಲ್ಲೆ ರಸ್ತೆಯ ನಿವಾಸದಲ್ಲಿ ಸೋಮವಾರ 81 ವರ್ಷದ ಗಿರೀಶ್‌ ಕಾರ್ನಾಡ್‌ ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಕಳೆದ 1 ತಿಂಗಳಿನಿಂದ ಬಳಲುತ್ತಿದ್ದ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಲ್ಯಾವೆಲ್ಲಿ ರೋಡ್​ ನಲ್ಲಿರುವ ನಿವಾಸದಲ್ಲಿ ಕಾರ್ನಾಡ್​ ಕೊನೆ ಉಸಿರೆಳೆದಿದ್ದಾರೆ.

ಗಿರೀಶ್ ಕಾರ್ನಾಡ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿಯವರು, ನಟನೆ ಸೇರಿದಂತೆ ಬಹುಮುಖ ಪ್ರತಿಭೆಯನ್ನು ಹೊಂದಿದ್ದ ಕಾರ್ನಾಡರ ಕೊಡುಗೆ ದೊಡ್ಡದಿದೆ. ಅವರ ಸೇವೆಗಳು ಮುಂದಿನಗಳಲ್ಲೂ ಸಹ ಹಸಿರಾಗಿರುತ್ತವೆ. ಇವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

 

 

 

 

 

 

 

 

 

 

 

 

 

 

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top