fbpx
ಸಮಾಚಾರ

ನಿವೃತ್ತಿ ಘೋಷಿಸಿದ ನಂತರ ಬಿಜೆಪಿ ಸೇರ್ತಾರಾ ಧೋನಿ?

ವಿಶ್ವಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತು ತನ್ನ ವಿಶ್ವಕಪ್ ಪ್ರಯಾಣವನ್ನು ಪೂರ್ಣಗೊಳಿಸಿತ್ತು. ಇದೇ ವೇಳೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿ ಪಡೆಯಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಧೋನಿ ಭವಿಷ್ಯದ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಕೇಂದ್ರದ ಮಾಜಿ ಸಚಿವ ಸಂಜಯ್ ಪಾಸ್ವಾನ್ ಅವರು ಧೋನಿ ನಿವೃತ್ತಿ ಬಳಿಕ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

 

 

 

ಧೋನಿಯವರು ನನ್ನ ಪರಮಿತ್ರರು ಅವರಿಗೆ ಬಿಜೆಪಿ ಬಗ್ಗೆ ಅಪಾರ ಗೌರವ ಮತ್ತು ಒಲವು ಇದೆ. ಅವರನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಲು ನಾವು ಸಿದ್ಧರಿದ್ದೇವೆ. ಆದರೆ ಕ್ರಿಕೆಟ್‍ಗೆ ವಿದಾಯ ಹೇಳಿದ ನಂತರವಷ್ಟೇ ಇದು ಸಾಧ್ಯವಾಗಲಿದೆ ಎಂದು ಸುದ್ದಿವಾಹಿನಿಯೊಂದಕ್ಕೆ ಪಾಸ್ವಾನ ತಿಳಿಸಿದ್ದಾರೆ.

ಈ ವರ್ಷದ ಅಂತ್ಯದಲ್ಲಿ ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯಲಿದೆ. ಆ ವೇಳೆ ಧೋನಿಯನ್ನು ಜಾರ್ಖಂಡ್ ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕೂಡ ಬಿಜೆಪಿ ಸೂಚಿಸಬಹುದು ಎಂಬ ಮಾತುಗಳು ಕೂಡ ಹರಿದಾಡುತ್ತಿವೆ.

ಈ ಹಿಂದೆ ಕೂಡ ಮಹೇಂದ್ರ ಸಿಂಗ್ ಧೋನಿ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದಕ್ಕೆ ಮುಖ್ಯ ಕಾರಣ ಧೋನಿ ಹಾಗೂ ಅಮಿತ್​ ಶಾ ಅವರ ವಿಶೇಷ ಭೇಟಿಯಾಗಿತ್ತು. ಬಿಜೆಪಿ ಆಯೋಜಿಸಿದ್ದ ಸಂಪರ್ಕ್​ ಫರ್ ಸಮರ್ಥನ್ ಎಂಬ ಅಭಿಯಾನಕ್ಕೆ ಬೆಂಬಲ ನೀಡುವಂತೆ ಅಮಿತ್ ಶಾ ಧೋನಿ ಅವರನನ್ನು ಕೋರಿದ್ದರು. ಇದೇ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷರು ಟೀಂ ಇಂಡಿಯಾ ಮಾಜಿ ನಾಯಕನಿಗೆ ಪಕ್ಷ ಸೇರುವಂತೆ ಆಫರ್ ನೀಡಿದ್ದರು ಎಂದು ಹೇಳಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top