fbpx
ಸಮಾಚಾರ

ಶಿವಣ್ಣನ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ಅನಿಲ್ ಕುಂಬ್ಳೆ.

‘ಹ್ಯಾಟ್ರಿಕ್‌ ಹೀರೊ’ ಶಿವರಾಜ್‌ಕುಮಾರ್‌ ಅವರು ಲಂಡನ್‌ನಲ್ಲಿ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ನಿನ್ನೆ ಶಿವಣ್ಣ ಲಂಡನ್‌ನಲ್ಲಿಯೇ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಖ್ಯಾತ ಕ್ರಿಕೆಟ್‌ಪಟು ಅನಿಲ್‌ ಕುಂಬ್ಳೆ ಅವರು ಶಿವಣ್ಣ ಅವರ ಹುಟ್ಟುಹಬ್ಬದ ಸಮಾರಂಭಕ್ಕೆ ಭೇಟಿ ನೀಡಿ ಶುಭಾಶಯ ಕೋರಿ ಸರ್ಪ್ರೈಸ್ ನೀಡಿದ್ದಾರೆ. ಇದನ್ನು ಶಿವಣ್ಣ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

 

 

ಅನಿಲ್ ಕುಂಬ್ಳೆ ಅವರು ಶಿವಣ್ಣ ಹಾಗೂ ಅವರ ಕುಟುಂಬದ ಜೊತೆಯಿರುವ ಫೋಟೋ ಹಾಕಿ ಅದಕ್ಕೆ, “ಹುಟ್ಟುಹಬ್ಬದಂದೇ ಶಿವಣ್ಣ ಅವರನ್ನು ಭೇಟಿ ಮಾಡಿದ್ದು ಖುಷಿ ಆಗಿದೆ. ಶಿವಣ್ಣ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಹಾಗೂ ನಿಮ್ಮ ಆರೋಗ್ಯ ಬೇಗ ಚೇತರಿಸಿಕೊಳ್ಳಲಿ” ಎಂದು ಟ್ವೀಟ್ ಮಾಡಿದ್ದಾರೆ.

 

 

ಶಿವಣ್ಣ ಕೂಡ ತಮ್ಮ ಟ್ವಿಟ್ಟರಿನಲ್ಲಿ, “ಕ್ರಿಕೆಟ್ ಅಂದ್ರೆ ನನಗೆ ಇಷ್ಟ, ಅದರಲ್ಲೂ ನಮ್ಮ ಕನ್ನಡದ ಕ್ರಿಕೆಟ್ ಆಟಗಾರರು ಅಂದ್ರೆ ನನಗೆ ಪ್ರೀತಿ ಜಾಸ್ತಿ. ನನ್ನ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಆಗಿ ಸಿಕ್ಕ ನನ್ನ ನೆಚ್ಚಿನ ಆಟಗಾರ, ನನ್ನ ಒಳ್ಳೆಯ ಸ್ನೇಹಿತ ಅನಿಲ್ ಕುಂಬ್ಳೆ ಅವರೇ ನಿಮ್ಮ ಭೇಟಿ ಖುಷಿ ಕೊಡ್ತು” ಎಂದು ಟ್ವೀಟ್ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top